ಚಂಪೂ ಕವಿಗಳು ಕೃತಿಯ ವಿಶೇಷವೆನೆಂದರೆ ಇಡೀ ಕನ್ನಡ ಸಾಹಿತ್ಯದ ಚರಿತ್ರೆಯನ್ನು ಚಂಪೂ, ಶಾಸ್ತ್ರ ಸಾಹಿತ್ಯ, ವಚನ, ಪಟ್ಪದಿ ಹೀಗೆ ಪ್ರಮುಖವಾದ ಸಾಹಿತ್ಯ ರೂಪಗಳನ್ನು ಮೂಲಮಾನವನ್ನಾಗಿ ಮಾಡಿಕೊಂಡು ಬರೆದದ್ದು ಇದೇ ಮೊದಲು, ಮತ್ತು ಈ ಬರವಣಿಗೆ ಸಾಧ್ಯವಾದ ಮಟ್ಟಿಗೆ ಇದುವರೆಗೂ ಉಪಲಬ್ದದ ಸಾಮಗ್ರಿಯನ್ನು ಬಳಸಿಕೊಳ್ಳುವುದಲ್ಲದೆ, ಕೆಲವು ಸಂಪುಟಗಳಲ್ಲಿ ಹೊಸ ದೃಷ್ಟಿಕೋನವನ್ನೂ ಪ್ರತಿಪಾದಿಸುವಂತೆ ರಚಿತವಾಗಿದೆ. ಈ ಹತ್ತು ಕಿರು ಸಂಪುಟಗಳನ್ನು ಓದಿದ ಯಾರಿಗಾದರೂ ಕನ್ನಡ ಸಾಹಿತ್ಯದ ಸಾಧನೆಯ ಪರಿಚಯ ತಕ್ಕಮಟ್ಟಿಗೆ ಆಗುವುದೆಂಬುದರಲ್ಲಿ ಅನುಮಾನವಿಲ್ಲ ಎಂದು ಜಿ.ಎಸ್ ಶಿವರುದ್ರಪ್ಪ ಪುಸ್ತಕದ ಮುನ್ನುಡಿಯಲ್ಲಿ ತಿಳಿಸಿದ್ದಾರೆ.
ಡಾ. ಪಿ. ವಿ. ನಾರಾಯಣ, ಬೆಂಗಳೂರಿನ ವಿಜಯಾ ಕಾಲೇಜಿನಲ್ಲಿ ಕನ್ನಡ ಪ್ರವಾಚಕರಾಗಿದ್ದರು. ತಂದೆ ಪಿ.ವೆಂಕಪ್ಪಯ್ಯ, ತಾಯಿ ನರಸಮ್ಮ. ಬೆಂಗಳೂರಿನಲ್ಲಿ 1942ರ ಡಿ.18 ರಂದು ಹುಟ್ಟಿದರು. ಮೈಸೂರು ವಿಶ್ವವಿದ್ಯಾಲಯದಿಂದ ಎಂ.ಎ. (ಕನ್ನಡ) ಕರ್ನಾಟಕ ವಿಶ್ವವಿದ್ಯಾಲಯದಿಂದ ಎಂ.ಎ. (ಇಂಗ್ಲಿಷ್), “ವಚನ ಸಾಹಿತ್ಯ: ಒಂದು ಸಾಂಸ್ಕೃತಿಕ ಅಧ್ಯಯನ” ಮಹಾಪ್ರಬಂಧಕ್ಕೆ ಬೆಂಗಳೂರು ವಿಶ್ವವಿದ್ಯಾಲಯದಿಂದ ಪಿಎಚ್.ಡಿ. ಪಡೆದಿದ್ದಾರೆ.. ವಿಮರ್ಶೆ/ಸಂಶೋಧನೆ-ಬಳ್ಳಿಗಾವೆ, ಕಾಯತತ್ತ್ವ, ಚಂಪೂಕವಿಗಳು, ವಚನ ಚಳವಳಿ, ವಚನ ವ್ಯಾಸಂಗ ಮೊದಲಾದ 16ಕೃತಿಗಳು. ಸಂಪಾದಿತ-ಬಸವ ಪುರಾಣ ಸಂಗ್ರಹ, ಪದ್ಮಿನೀ ಪರಿಣಯ ಮೊದಲಾದ 5 ಕೃತಿಗಳು. ಅನುವಾದ-ಮದುವೆ ಮತ್ತು ನೀತಿ, ಹನ್ನೆರಡನೇ ರಾತ್ರಿ, ಅಶ್ವತ್ಥಾಮನ್, ಬುವಿಯ ಬಸಿರಿಗೆ ಪಯಣ, ಪಂಪ ರಾಮಾಯಣ ಮುಂತಾದ 12 ಕೃತಿಗಳು. ಕಾದಂಬರಿಗಳು-ಸಾಮಾನ್ಯ, ...
READ MORE