ಇತಿಹಾಸದ ಮಹಾನ್ ವ್ಯಕ್ತಿತ್ವ ಎಂಬ ಉಪಶೀರ್ಷಿಕೆಯಡಿ ಲೇಖಕ ಎನ್.ಎಸ್. ಶ್ರೀಧರಮೂರ್ತಿ ಅವರು ‘ಚಾಣಕ್ಯ’ ಎಂಬ ಕೃತಿ ರಚಿಸಿದ್ದು, ಚಾಣಕ್ಯನ ಯುದ್ಧ ನೀತಿ, ಆರ್ಥಿಕ ಸಮಸ್ಯೆಗಳ ನಿರ್ವಹಣೆ, ಅರಸನು ಅನುಸರಿಸಬೇಕಾದ ಆರ್ಥಿಕ ನೀತಿಗಳು, ಜನರ ನಿಯಂತ್ರಣಕ್ಕೆ ಬಿಗಿ ನಿಯಮಗಳು ಇತ್ಯಾದಿ ಹೀಗೆ ಆಡಳಿತಾತ್ಮಕವಾದ ಯಾವುದೇ ವಲಯಕ್ಕೆ ಸಂಬಂಧಿಸಿದಂತೆ ನಿಯಮಗಳನ್ನು ಸೂಚಿಸಿರುವ ಚಾಣಕ್ಯ -ಇತಿಹಾಸ ಕಂಡರಿಯದ ವ್ಯಕ್ತಿತ್ವವೇ ಆಗಿದೆ ಎಂದು ಲೇಖಕರು ಅಭಿಪ್ರಾಯಪಟ್ಟು, ಅವರ ಜೀವನ ಚರಿತ್ರೆಯನ್ನು ಪರಿಣಾಮಕಾರಿಯಾಗಿ ಕಟ್ಟಿಕೊಟ್ಟಿದ್ದಾರೆ.
ಎನ್.ಎಸ್.ಶ್ರೀಧರಮೂರ್ತಿ ಮಂಗಳೂರು ವಿಶ್ವವಿದ್ಯಾಲಯದಿಂದ ಅರ್ಥಶಾಸ್ತ್ರದಲ್ಲಿ ಚಿನ್ನದ ಪದಕ ಮತ್ತು ರ್‍ಯಾಂಕ್ ನೊಂದಿಗೆ ಸ್ನಾತಕೋತ್ತರ ಪದವಿಯನ್ನು ಪಡೆದವರು. ಉಪನ್ಯಾಸಕರಾಗಿ ತಮ್ಮ ವೃತ್ತಿಜೀವನವನ್ನು ಆರಂಭಿಸಿದ ಇವರು 'ಮಲ್ಲಿಗೆ' ಮಾಸಪತ್ರಿಕೆಯ ಮೂಲಕ ಪತ್ರಿಕೋದ್ಯಮಕ್ಕೆ ಬಂದು ಕಳೆದ ಎರಡು ದಶಕದಿಂದ ಸಾಂಸ್ಕೃತಿಕ ಪತ್ರಿಕೋದ್ಯಮವನ್ನು ಉಳಿಸುವಲ್ಲಿ ವಿವಿಧ ಪತ್ರಿಕೆಗಳ ಮೂಲಕ ಶ್ರಮಿಸುತ್ತಿದ್ದಾರೆ. ಚಲನಚಿತ್ರ ಇತಿಹಾಸದ ಕುರಿತು ಆಳವಾದ ಅಧ್ಯಯನ ನಡೆಸಿದ್ದಾರೆ. ಇವರು ಸಾಹಿತ್ಯ ಮತ್ತು ಆಧ್ಯಾತ್ಮ ಕ್ಷೇತ್ರದಲ್ಲಿಯೂ ಕೆಲಸ ಮಾಡಿದ್ದಾರೆ. ‘ಸಿಂಹಾವಲೋಕನ, ನಗುವ ನಯನ ಮಧುರ ಮೌನ, ಮಂಜುಳಾ ಎಂಬ ಎಂದೆಂದೂ ಮರೆಯದ ಹಾಡು, ಸಾಹಿತ್ಯ ಸಂವಾದ, ಹಾಡು ಮುಗಿಯುವುದಿಲ್ಲ, ಸಿನಿಮಾ ಎನ್ನುವ ನಾಳೆ’ ಅವರ ಪ್ರಮುಖ ಕೃತಿಗಳು. ಕನ್ನಡ ಚಿತ್ರಗೀತೆಗಳ ಸಾಂಸ್ಕೃತಿಕ ...
READ MORE