'ಛಂದೋವಿವೇಕ'ವು ವರ್ಣವೃತ್ತ, ಮಾತ್ರಾಜಾತಿ ಮತ್ತು ಕರ್ಷಣಜಾತಿ ಎಂದು ವಿಭಕ್ತವಾದ ಎಲ್ಲ ಬಗೆಯ ಛಂದಸ್ಸುಗಳನ್ನೂ ವಿವೇಚಿಸುವ ಪ್ರಬಂಧಗಳ ಸಂಕಲನ. ಲೇಖಕರ ದೀರ್ಘಕಾಲಿಕ ಆಲೋಚನೆಯ ಸಾರವನ್ನು ಒಳಗೊಂಡ ಈ ಹೊತ್ತಗೆ ಪ್ರಧಾನವಾಗಿ ಛಂದಸ್ಸಿನ ಸೌಂದರ್ಯವನ್ನು ಲಕ್ಷಿಸುತ್ತದೆ. ತೌಲನಿಕ ವಿಶ್ಲೇಷಣೆ ಮತ್ತು ಅಂತಃಶಾಸ್ತ್ರೀಯ ಅಧ್ಯಯನಗಳ ತೆಕ್ಕೆಗೆ ಬರುವ ಬರೆಹಗಳೂ ಇಲ್ಲಿವೆ. ಶಾಸ್ತ್ರಕಾರನಿಗಲ್ಲದೆ ಸಿದ್ಧಹಸ್ತನಾದ ಕವಿಗೆ ಮಾತ್ರ ಸುರಿಸಬಲ್ಲ ಎಷ್ಟೋ ಹೊಳಹುಗಳು ಕೃತಿಯ ಮೌಲಿಕತೆಯನ್ನು ಹೆಚ್ಚಿಸಿವೆ. ಈ ಗ್ರಂಥವು ತನ್ನ ಹೆಸರಿಗೆ ತಕ್ಕಂತೆ ಸಾವಿರಾರು ವರ್ಷಗಳ ಇತಿಹಾಸವುಳ್ಳ ಛಂದಃಶಾಸ್ತ್ರವನ್ನು ಸರಿಯಾಗಿ ಅರ್ಥೈಸಿಕೊಳ್ಳಬೇಕಾದ ಬಗೆಯನ್ನೂ ಬೇರೆ ಬೇರೆ ಕಾರಣಗಳಿಂದ ಅದರಲ್ಲಿ ಏರ್ಪಟ್ಟ ಅಗ್ರಹಣ, ದುಗ್ರ್ರಹಣ, ಅನ್ಯಥಾಗ್ರಹಣ ಮುಂತಾದ ಲೋಪ-ದೋಷಗಳನ್ನೂ ವಿವರಿಸಿ ಯುಕ್ತಾಯುಕ್ತ ವಿವೇಕವನ್ನು ಮೂಡಿಸುತ್ತದೆ.
ಶತಾವಧಾನಿ ಗಣೇಶ ಅವರು ಉತ್ತಮ ವಾಗ್ಮಿಗಳು. ವಿದ್ವಾಂಸರು. ಅವಧಾನ ಕಲೆಯನ್ನು ರೂಢಿಸಿಕೊಂಡವರು. “ಕನ್ನಡದಲ್ಲಿ ಅವಧಾನ ಕಲೆ” ಎಂಬ ಮಹಾಪ್ರಬಂಧಕ್ಕೆ ಹಂಪಿಯ ಕನ್ನಡ ವಿಶ್ವವಿದ್ಯಾನಿಲಯ ಪ್ರಪ್ರಥಮ ಡಿ.ಲಿಟ್. ಪದವಿ ನೀಡಿ ಗೌರವಿಸಿದೆ. ಪ್ರಸ್ತುತ ಭಾರತೀಯ ವಿದ್ಯಾಭವನದ ಬೆಂಗಳೂರು ಶಾಖೆಯ ಸಂಸ್ಕೃತ ವಿಭಾಗದ ನಿರ್ದೇಶಕರಾಗಿದ್ದಾರೆ. ಆರ್.ಶಂಕರನಾರಾಯಣ ಅಯ್ಯರ್ ಹಾಗೂ ಅಲಮೇಲಮ್ಮ ದಂಪತಿಯ ಪುತ್ರರು.04-12-1962ರಂದು ಕೋಲಾರದಲ್ಲಿ ಜನನ. ಬೆಂಗಳೂರಿನ ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯ (UVCE), ದಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಪದವೀಧರರು. ಬೆಂಗಳೂರಿನ ಇಂಡಿಯನ್ ಇನ್ಸ್ಟಿ ಟ್ಯೂಟ್ ಆಫ್ ಸೈನ್ಸ್ ನಲ್ಲಿ ಮೆಟೀರಿಯಲ್ ಸೈನ್ಸ್ ಹಾಗೂ ಮೆಟಲರ್ಜಿಯಲ್ಲಿ ಎಂ.ಎಸ್ಸಿ. ಪದವೀಧರರು. ಮೈಸೂರ್ ವಿಶ್ವವಿದ್ಯಾಲಯದ ಅಡಿಯಲ್ಲಿ ...
READ MORE