ಸಾಹಿತ್ಯ, ಸಿನಿಮಾ, ರಂಗಭೂಮಿ, ಸಂಗೀತ, ಜಾನಪದ ವಿದ್ವಾಂಸ ಚಂದ್ರಶೇಖರ ಕಂಬಾರ ಅವರ ಬಾಲ್ಯ-ಸಾಹಿತ್ಯ ಜಗತ್ತು-ಜೀವನ ಚಿತ್ರಣವನ್ನು ಲೇಖಕ ಟಿ.ಎಸ್. ಗೋಪಾಲ ಅವರು ನೀಡಿದ್ದು, ನಾ. ಸೋಮೇಶ್ವರ ಅವರು ಈ ಕೃತಿಯನ್ನು ಸಂಪಾದಿಸಿದ್ದಾರೆ. ಮಕ್ಕಳನ್ನು ಗಮನದಲ್ಲಿರಿಸಿಕೊಂಡು ಈ ಕೃತಿಯನ್ನು ರಚಿಸಲಾಗಿದೆ.
ಲೇಖಕ ಟಿ. ಎಸ್. ಗೋಪಾಲ್ ಅವರ ಹೆಸರು ತಿರು ಶ್ರೀನಿವಾಸಾಚಾರ್ಯ ಗೋಪಾಲ್. ಕನ್ನಡ ಭಾಷೆ, ಸಾಹಿತ್ಯ, ವನ್ಯಜೀವನ, ವಿಜ್ಞಾನ ಕುರಿತ ಪುಸ್ತಕಗಳನ್ನು ಬರೆದಿದ್ದಾರೆ. ಅವರ 'ಕಾಡು ಕಲಿಸುವ ಪಾಠ' ಕೃತಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪುಸ್ತಕ ಬಹುಮಾನ (2013) ದೊರೆತಿದೆ. ಮೈಸೂರು ವಿಶ್ವವಿದ್ಯಾಲಯದಿಂದ ಬಿ. ಎ. ಹಾಗೂ ಎಂ. ಎ. ಪದವಿ (ಚಿನ್ನದ ಪದಕ) ಪಡೆದಿರುವ ಅವರು ದಕ್ಷಿಣ ಕೊಡಗಿನ ಶ್ರೀಮಂಗಲ ಪದವಿಪೂರ್ವ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿ, ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದ್ದಾರೆ. ಕೊಡಗು ಜಿಲ್ಲಾ ಪದವಿಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘದ ಸ್ಥಾಪಕ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ ಅವರು ...
READ MORE