ಕೆ. ಚಿನ್ನಪ್ಪ ಗೌಡ
ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ತಾಲ್ಲೂಕಿನ ಕೂಡೂರಿನವರಾದ ಸಾಹಿತಿ ಕೆ. ಚಿನ್ನಪ್ಪ ಗೌಡ, ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಉಪಕುಲಪತಿಗಳಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮದ್ರಾಸ್ ವಿಶ್ವವಿದ್ಯಾಲಯದಿಂದ ಕನ್ನಡ ಭಾಷೆಯಲ್ಲಿ ಸ್ನಾತಕೋತ್ತರ ಪದವಿ ಪಡೆದು, ಮಂಗಳೂರು ವಿಶ್ವವಿದ್ಯಾಲಯದಲ್ಲಿ ಬಿ.ಎ.ವಿವೇಕ ರೈ ಅವರ ಮಾರ್ಗದರ್ಶನದಲ್ಲಿ ’ಭೂತಾರಾಧನೆ- ಜಾನಪದೀಯ ಅಧ್ಯಯನ’ ವಿಷಯದಲ್ಲಿ ಪಿಎಚ್‌ಡಿ ಪಡೆದಿದ್ದಾರೆ. ಇವರ ಪ್ರಮುಖ ಕೃತಿಗಳೆಂದರೆ ಜಾಲಾಟ, ಭೂತಾರಾಧನೆ, ಭೂತಾರಾಧನೆ - ಜಾನಪದೀಯ ಅಧ್ಯಯನ, ಸಂಸ್ಕೃತಿ ಸಿರಿ, ಗೌಡ ಸಂಸ್ಕೃತಿ ಮತ್ತು ಆಚರಣೆಗಳು, ಸೇರಿಗೆ, ಕಿತ್ತಲೆ ಹಣ್ಣಲ್ಲ ಮುಂತಾದವು. ...
READ MORE