ನಡೆದಾಡುವ ವಿಶ್ವಕೋಶ, ಕಡಲತೀರದ ಭಾರ್ಗವ ಎಂದೇ ಹೆಸರಾಗಿರುವ ಕವಿ ಕೋಟ ಶಿವರಾಮ ಕಾರಂತ ಅವರ ಸಾಹಿತ್ಯ ಕೃತಿ ʼಚೆಲುವಿನ ಕನ್ನಡ ನಾಡುʼ. ಈ ಪುಸ್ತಕವು ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯದವರಿಂದ ಪ್ರಥಮ ವಿಶ್ವ ಕನ್ನಡ ಸಮ್ಮೇಳನದ ಸಂದರ್ಭದಲ್ಲಿ ಪ್ರಕಟಗೊಂಡಿದೆ. ಕನ್ನಡ ನಾಡು, ಕನ್ನಡ ಭಾಷೆ, ಕನ್ನಡದ ಸಂಸ್ಕೃತಿ, ಸಾಹಿತ್ಯ, ಇತಿಹಾಸ, ಇಲ್ಲಿನ ವೈವಿದ್ಯಗಳು ಹೀಗೆ ನಾನಾ ವಿಚಾರಗಳ ಬಗ್ಗೆ ಪುಸ್ತಕವು ಓದುಗನಿಗೆ ವರ್ಣರಂಜಿತವಾಗಿ ಹೇಳಿಕೊಡುತ್ತದೆ.
ತಮ್ಮ ಬಹುಮುಖ ಪ್ರತಿಭೆಯಿಂದ ಕನ್ನಡ ಸಾಹಿತ್ಯ ಶ್ರೀಮಂತಗೊಳಿಸಿದ ಕೋಟ ಶಿವರಾಮ ಕಾರಂತರ ಕೊಡುಗೆ ಅನನ್ಯ- ಅಭೂತಪೂರ್ವ. 1902ರ ಅಕ್ಟೋಬರ್ 10ರಂದು ಜನಿಸಿದರು. ತಂದೆ ಶೇಷ ಕಾರಂತ ತಾಯಿ ಲಕ್ಷ್ಮಮ್ಮ. ಕುಂದಾಪುರದಲ್ಲಿ ಪ್ರೌಢಶಾಲಾ ವ್ಯಾಸಂಗವನ್ನು ಮುಗಿಸಿ ಮಂಗಳೂರಿನ ಸರ್ಕಾರಿ ಕಾಲೇಜನ್ನು ಸೇರಿದಾಗಲೆ ಗಾಂಧೀಜಿಯವರ ಅಸಹಕಾರ ಚಳುವಳಿಗೆ ಧುಮುಕಿದರು. ಆಡು ಮುಟ್ಟದ ಸೊಪ್ಪಿಲ್ಲ ಎಂಬಂತೆ ಕಾರಂತರು ಪ್ರವೇಶಿಸದ ಕ್ಷೇತ್ರವಿಲ್ಲ. ಅವರು ಸರ್ಕಾರದಲ್ಲಿ ಅಥವಾ ಇತರರ ಆಶ್ರಯದಲ್ಲಿ ದುಡಿಯಲಿಲ್ಲ. ಒಂಟಿಸಲಗದಂತೆ ನಡೆದರು, ವ್ಯಾಪಾರ ಮಾಡಿದರು, ವಸಂತ, ವಿಚಾರವಾಣಿ ಪತ್ರಿಕೆ ನಡೆಸಿದರು. ಬಾಲವನ ಸ್ಥಾಪಿಸಿದ್ದರು. ಚಲನಚಿತ್ರ , ಯಕ್ಷಗಾನ ಪ್ರಯೋಗಗಳನ್ನು ನಡೆಸಿದ್ದರು, ಹೀಗೆ ...
READ MORE