ಲೇಖಕ ಡಾ. ಗಜಾನನ ಶರ್ಮ ಅವರು ಬರೆದ ಐತಿಹಾಸಿಕ ಕಾದಂಬರಿ- ʻಚೆನ್ನಭೈರಾದೇವಿʼ. ದಕ್ಷಿಣ ಕೊಂಕಣ ಹಾಗೂ ಮಲೆನಾಡನ್ನು 54 ವರ್ಷಗಳವರೆಗೂ ಆಳಿದ ಚೆನ್ನಭೈರಾದೇವಿ; ಕರಿಮೆಣಸಿನ ರಾಣಿಯ ಅಕಳಂಕ ಚರಿತೆ -ಈ ಕೃತಿ. ಸಾಹಿತಿ ಜೋಗಿಯವರು ಈ ಕೃತಿಗೆ ಬೆನ್ನುಡಿ ಬರೆದು,ʻಚೆನ್ನಭೈರಾದೇವಿಯ ಬದುಕಿನ ಅಪರೂಪದ ಘಟನೆಗಳನ್ನು ತಂದು ಕಾದಂಬರಿಕಾರರು ನಮ್ಮ ಮುಂದಿಟ್ಟಿದ್ದಾರೆ. ಪುಟಪುಟದಲ್ಲೂ ರೋಮಾಂಚನಗೊಳಿಸುವ ವಿವರಗಳ ಜತೆಗೇ ರಾಜನೀತಿ, ಜೀವನ ವಿಧಾನ, ಧೀಮಂತಿಕೆ, ಉತ್ಕಟವಾದ ಪ್ರೇಮ ಮತ್ತು ಹೆಣ್ಣಿನ ಅಂತಃಸತ್ವವನ್ನು ತೆರೆದಿಡುವ ಈ ಕೃತಿ, ಕನ್ನಡ ಚಾರಿತ್ರಿಕ ಕಥನಗಳ ಪಟ್ಟಿಗೆ ಅಮೂಲ್ಯ ಸೇರ್ಪಡೆ. ಇತ್ತಿಚಿನ ಮೂರು ನಾಲ್ಕು ದಶಕಗಳಲ್ಲಿ ನಾನು ಇಷ್ಟು ಸಮೃದ್ಧವಾದ ಪ್ರಾಮಾಣಿಕವಾದ ಐತಿಹಾಸಿಕ ಕಾದಂಬರಿಯನ್ನು ಓದಿಲ್ಲʼ ಎಂದು ಅಭಿಪ್ರಾಯ ಪಟ್ಟಿದ್ದಾರೆ.
ಡಾ| ಗಜಾನನ ಶರ್ಮಾರವರು ಪ್ರಸಿದ್ಧ ನಟ, ನಾಟಕಕಾರ, ನಿರ್ದೇಶಕ ಮತ್ತು ಸಾಹಿತಿಯು ಹೌದು. ವೃತ್ತಿಯಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದಲ್ಲಿ ಅಧೀಕ್ಷಕ ಇಂಜಿನಿಯರ್ ಆಗಿದ್ದರು ಕನ್ನಡ ಸಾಹಿತ್ಯದ ಹಲವಾರು ರಂಗಗಳಲ್ಲಿ ತಮ್ಮ ಛಾಪನ್ನು ಮೂಡಿಸಿದ್ದಾರೆ. ’ಪುನರ್ವಸು’ ಇವರ ಪ್ರಮುಖ ಕಾದಂಬರಿ. 'ನಾಣಿ ಭಟ್ಟನ ಸ್ವರ್ಗದ ಕನಸು', 'ಗೊಂಬೆ ರಾವಣ', ಆಗ ಮತ್ತು ಸುಂದರಿ', 'ಹಂಚಿನಮನೆ ಪರಸಪ್ಪ', 'ಪುಸ್ತಕ ಪಾಂಡಿತ್ಯ' ಮುಂತಾದ ಹತ್ತಕ್ಕೂ ಹೆಚ್ಚು ಮಕ್ಕಳ ನಾಟಕ, 'ಕನ್ನಂಬಾಡಿಯ ಕಟ್ಟದಿದ್ದರೆ', 'ದ್ವಂದ್ವ ದ್ವಾಪರ', 'ಬೆಳ್ಳಿಬೆಳಕಿನ ಹಿಂದೆ' ಮುಂತಾದ ನಾಟಕಗಳನ್ನು ರಚಿಸಿದ್ದಾರೆ. ವಿಶ್ವೇಶ್ವರಯ್ಯನವರ ವೃತ್ತಿ ಜೀವನದ ಆತ್ಮಕಥೆಯನ್ನು ಕನ್ನಡಕ್ಕೆ 'ನನ್ನ ...
READ MORE