ಪತ್ರಕರ್ತ ವಿಶ್ವೇಶ್ವರ ಭಟ್ ಅವರು ಬರೆದ ಕೆಲವು ಸಣ್ಣ ಕಥೆಗಳ ಸಂಕಲನವಿದು-ಚಿಕ್ಕದು ಚೆಂದ. ವಿಶೇಷ ಲೇಖನಗಳು, ಅಂಕಣ ಬರಹಗಳು ಇತ್ಯಾದಿ ಬರಹಗಳ ಮೂಲಕ ಓದುಗ ವರ್ಗವನ್ನು ಸೃಷ್ಟಿಸಿಕೊಂಡಿರುವ ವಿಶ್ವೇಶ್ವರ ಭಟ್ ಅವರು ಕಥೆಗಳನ್ನು ಬರೆಯುವ ಮೂಲಕವೂ ತಮ್ಮದೇ ಓದುಗ ವಲಯವನ್ನು ಕಾಪಿಟ್ಟುಕೊಂಡು ಬಂದಿದ್ದಾರೆ. ವಸ್ತು, ನಿರೂಪಣಾ ಶೈಲಿ, ಪಾತ್ರಗಳ ಸೃಷ್ಟಿ, ಸನ್ನಿವೇಶಗಳ ಜೋಡಣೆ ಇತ್ಯಾದಿ ಸಾಹಿತ್ಯಕ ಅಂಶಗಳಿಂದ ಇಲ್ಲಿಯ ಕಥೆಗಳು ಓದುಗರ ಗಮನ ಸೆಳೆಯುತ್ತವೆ.
ವಿಶ್ವೇಶ್ವರ ಭಟ್ ಅವರು ಉತ್ತರಕನ್ನಡ ಜಿಲ್ಲೆಯ ಕುಮಟಾದ ಮೂರೂರಿನವರು. ಓದಿದ್ದು ಎಂ.ಎಸ್ಸಿ. ಹಾಗೂ ಎಂ.ಎ. ನಾಲ್ಕು ಚಿನ್ನದ ಪದಕ ವಿಜೇತರು, ಇಂಗ್ಲೆಂಡಿನಲ್ಲಿ ಪತ್ರಿಕೋದ್ಯಮದಲ್ಲಿ ಉನ್ನತ ವ್ಯಾಸಂಗ, ಸಂಯುಕ್ತ ಕರ್ನಾಟಕ, ಕನ್ನಡಪ್ರಭದಲ್ಲಿ ಉಪಸಂಪಾದಕರಾಗಿ ವೃತ್ತಿ ಜೀವನ ಆರಂಭ, ವಿಜಯ ಕರ್ನಾಟಕ, ಕನ್ನಡ ಪ್ರಭ ಹಾಗೂ ಸುವರ್ಣ ನ್ಯೂಸ್ ಚಾನಲ್‌ನ ಪ್ರಧಾನ ಸಂಪಾದಕ, ಏಷಿಯನ್ ಕಾಲೇಜ್ ಆಫ್ ಜರ್ನಲಿಸಮ್‌ನಲ್ಲಿ ಅಸಿಸ್ಟೆಂಟ್ ಪ್ರೊಫೆಸರ್, ಕೇಂದ್ರ ಪ್ರವಾಸೋದ್ಯಮ ಹಾಗೂ ಸಂಸ್ಕೃತಿ ಖಾತೆ ಸಚಿವರಿಗೆ ವಿಶೇಷ ಕರ್ತವ್ಯ ಅಧಿಕಾರಿಯಾಗಿಯೂ ಸೇವೆ ಸಲ್ಲಿಸಿದ್ದಾರೆ. ಸದ್ಯ, “ವಿಶ್ವವಾಣಿ' ದಿನಪತ್ರಿಕೆಯ ಪ್ರಧಾನ ಸಂಪಾದಕರು. 'ನೂರೆಂಟು ವಿಶ್ವ, 'ಇದೇ ಅಂತರಂಗ ಸುದ್ದಿ' ...
READ MORE