‘ಚಿಲಿಯ ಕಲಿಗಳು ’ ಗಣಿ ಪಾತಾಳದಲ್ಲಿ 33 ಜನ 69 ದಿನ ಕೃತಿಯು ಸರೋಜಾ ಪ್ರಕಾಶ ಅವರ ಲೇಖನ ಸಂಕಲನವಾಗಿದೆ. ಈ ಕೃತಿಯ ಬೆನ್ನುಡಿಯಲ್ಲಿನ ಕೆಲವೊಂದು ವಿಚಾರಗಳು ಹೀಗಿವೆ : ಏಳುನೂರು ಮಿಟರ್ ಆಳದಲ್ಲಿ 33 ಗಣಿಗಾರರು ಸಿಕ್ಕಿಹಾಕಿಕೊಂಡಿದ್ದಾರೆ. ಹದಿನೇಳು ದಿನ ಶ್ರಮಿಸಿ 3 ಅಂಗುಲ ಬೋರ್ ರಂಧ್ರ ಕೊರೆದು ನೋಡಿದರೆ ಅವರೆಲ್ಲ ಬದುಕಿರುವುದು ಗೊತ್ತಾಗಿದೆ. ಇನ್ನೂ ದೊಡ್ಡ ರಂಧ್ರ ಕೊರೆದು ಅವರನ್ನು ಮೇಲಕ್ಕೆತ್ತಲು ನಾಲ್ಕು ತಿಂಗಳೇ ಬೇಕು. ಅದುವರೆಗೆ ಆ ಮುಷ್ಟಿಗಾತ್ರದ ರಂಧ್ರದ ಮೂಲಕ ಅವರಿಗೆ ಆಹಾರ- ಔಷಧ ರವಾನಿಸಬೇಕು ; ಅವರನ್ನು ಮೇಲಕ್ಕೆತ್ತಲು ರಾಕೆಟ್ ಮಾದರಿಯ ಲಿಫ್ಟ್ ನಿರ್ಮಿಸಬೇಕು. 2010ರ ಅಕ್ಟೋಬರ್ ನಲ್ಲಿ ಚಿಲಿ ಎಂಬ ಪುಟ್ಟ ದೇಶ ಎಲ್ಲರನ್ನೂ ಸುರಕ್ಷಿತ ಮೇಲೆತ್ತಿರುವಾಗ ಆ ಮಹಾಸಾಹಸದ ವೀಕ್ಷಣೆಗೆ 3000 ನೇರ ಪ್ರಸಾರದಲ್ಲಿ ಅವನ್ನು ಕಣ್ಣಾರೆ ನೋಡಿದರು. ಸಾಮಾನ್ಯ ಪ್ರದೇಶಗಳ ಈ ಅಸಾಮಾನ್ಯ ಸಾಧನೆ ‘ಮನುಕುಲಕ್ಕೇ ಸ್ಪೂರ್ತಿದಾಯಕ ಸಾಧನೆ’ ಎಂಬ ಶ್ಲಾಘನೆಗೆ ಪಾತ್ರವಾಯಿತು. ಕಲ್ಪನೆಗೂ ಮೀರಿದ ಈ ನೈಜತೆಯನ್ನು ಥ್ರಿಲ್ಲರ್ ಶೈಲಿಯಲ್ಲಿ ಬರೆದ ಸರೋಜಾ ಪ್ರಕಾಶ್ ಭೌತವಿಜ್ಞಾನದ ಉಪನ್ಯಾಸಕಿಯಾಗಿದ್ದವರು. ವಿಜ್ಞಾನವನ್ನು ಎಲ್ಲರಿಗೂ ಅರ್ಥವಾಗುವಂತೆ ಬರೆಯುವ ಇವರು ಚಿಲಿ ಸಾಹಸದ ಕತೆಯನ್ನು ಎಲ್ಲರಿಗೂ ಇಷ್ಟವಾಗುವಂತೆ ಬರೆದಿದ್ದಾರೆ. ಈ ಅಪೂರ್ವ ಘಟನೆ ಇಂಗ್ಲಿಷ್ ನಲ್ಲಿ ಕಾದಂಬರಿಯಾಗಿಯೊ, ಸಿನೆಮಾ ಆಗಿಯೊ ಬರುವ ಮೊದಲೇ ಕನ್ನಡ ಸಾಹಿತ್ಯಕ್ಕೆ ಸೇರ್ಪಡೆಯಾಗುತ್ತಿದೆ ಎಂದು ವಿಶ್ಲೇಷಿತವಾಗಿದೆ.
ಸರೋಜಾ ಪ್ರಕಾಶ ಅವರು ವಿಜ್ಞಾನಕ್ಕೆ ಸಂಬಂಧಿಸಿದಂತೆ ಹಲವು ಕೃತಿಗಳನ್ನ ರಚಿಸಿದ್ದಾರೆ. ಬಾನಲ್ಲಿ ಜನಗಣತಿ, ಚಿಲಿಯ ಕಲಿಗಳು ಸೇರಿದಂತೆ ಹಲವು ವಿಭಿನ್ನ ಕೃತಿಗಳನ್ನು ಕನ್ನಡ ಸಾಹಿತ್ಯ ಲೋಕಕ್ಕೆ ನೀಡಿದ್ದಾರೆ. ...
READ MORE