‘ಚಿರಸ್ಮರಣೆ’ ಕೃತಿಯು ನಿರಂಜನ ಅವರ ಕಾದಂಬರಿಯಾಗಿದೆ. ಈ ಕೃತಿಯು ಕಯ್ಯೂರಿನ ರೈತರ ಹೋರಾಟದ ಬಗೆಯನ್ನು ವಿವರಿಸುತ್ತದೆ. ಕೃತಿಯ ಕುರಿತು ಲೇಖಕ ಹೀಗೆ ಪ್ರಸ್ತಾವನೆ ನೀಡಿದ್ದಾರೆ. 'ಚಿರಸ್ಮರಣೆ' ಒಂದು ಕಾದಂಬರಿ, ಚರಿತ್ರೆಯಲ್ಲ. ಈ ಕೃತಿಯಲ್ಲಿ ನಾನು ಮಾಡಿರುವುದು, ಕಮ್ಮೂರಿನ ಹೋರಾಟದ ಅಂತಃಸ್ಸತ್ವವನ್ನುಆ ಕಾಲಾವಧಿಯ ಚೇತನವನ್ನು ಕಲೆಯನ್ನು ಸೆರೆಹಿಡಿಯುವ ಯತ್ನ. 'ಚಿರಸ್ಮರಣೆ'ಯ ಅನೇಕ ಪಾತ್ರಗಳು ನಿಜಜೀವನದಿಂದಲೇ ಕಾದಂಬರಿಯ ಪುಟಗಳಿಗೆ ನಡೆದುಬಂದಿವೆ. ಆದರೆ ಇಲ್ಲಿನ ಪಾತ್ರ ನಿರ್ವಹಣೆಗಾಗಿ ರಂಗಸಜ್ಜಿಕೆಯ ವೇಷಭೂಷಣಗಳನ್ನು ಅವು ನಿರಾಕರಿಸಿಲ್ಲ. ಇನ್ನು ಕೆಲಪಾತ್ರಗಳನ್ನು ನಾನು ಕಡೆದದ್ದು ನನ್ನ ಕಲ್ಪನೆಯ ಮೂಸೆಯಲ್ಲಿ. ರಚಿತವಾಗಿ ಇಪ್ಪತ್ತು ವರ್ಷಗಳಾದ ಮೇಲೆ 'ಚಿರಸ್ಮರಣೆ' ಮಲಯಾಳಂ ಭಾಷೆಯಲ್ಲಿ ಮರುಹುಟ್ಟು ಪಡೆಯಿತು. ಕೇರಳದಲ್ಲಿ ಅದಕ್ಕೆ ದೊರೆತ ಸ್ವಾಗತದ ವಿವರ ತಿಳಿದಾಗ ಧನ್ಯವಾದ' ಎನಿಸಿತು. ಸ್ವಲ್ಪ ಸಮಯದ ಅನಂತರ ಕನ್ನಡದಲ್ಲಿ ಎರಡನೆಯ ಮುದ್ರಣ ಬಂತು. ಮುಂದೆ ತಮಿಳು, ತೆಲುಗು, ಮರಾಠಿ, ಬಂಗಾಳಿ, ತುಳು ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಅನುವಾದಗಳು ಬರತೊಡಗಿದವು’ ಎನ್ನುತ್ತಾರೆ.
ಕನ್ನಡದ ಪ್ರತಿಭಾವಂತ ಲೇಖಕ, ಖ್ಯಾತ ಬರಹಗಾರ ನಿರಂಜನ ಅವರು ಹುಟ್ಟಿದ್ದು 15-06-1924ರಂದು. ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೇಸುಬ್ರಹ್ಮಣ್ಯದ ಸಮೀಪದ ಕುಳಗುಂದದಲ್ಲಿ. ತಾಯಿ ಚೆನ್ನಮ್ಮ. ಸುಳ್ಯದಲ್ಲಿ ಪ್ರಾಥಮಿಕ, ಮಾಧ್ಯಮಿಕ ಶಾಲೆಗಳಲ್ಲಿ ಓದು. ನೀಲೇಶ್ವರದಲ್ಲಿ ಪ್ರೌಢಶಾಲಾ ವಿದ್ಯಾಭ್ಯಾಸ. ಖ್ಯಾತ ವೈದ್ಯೆ, ಲೇಖಕಿ ಅನುಪಮಾ ನಿರಂಜನ ಅವರೊಂದಿಗೆ ವಿವಾಹವಾದರು. ನಿರಂಜನ ಅವರು ಒಬ್ಬ ಖ್ಯಾತ ಬರಹಗಾರ ಹಾಗೂ ಹೋರಾಟಗಾರ. ಅವರ ಮೊದಲ ಹೆಸರು ಕುಳಕುಂದ ಶಿವರಾಯ. ಅವರು 20ನೇ ಶತಮಾನದ ಪ್ರಮುಖ ಲೇಖಕ ಮತ್ತು ಪ್ರಗತಿಪರ ಚಳವಳಿಯ ಮುಂದಾಳು. ಗಾಂಧೀಜಿ, ಕಾರ್ಲ್ ಮಾರ್ಕ್ಸ್, ವ್ಲಾಡಿಮಿರ್ ಲೆನಿನ್ ವಿಚಾರಧಾರೆಗಳಿಂದ ಪ್ರಭಾವಿತರಾದವರು. ಶ್ರ್ರೀಯುತರು ಸುಮಾರು ...
READ MORE