ಚಿತ್ರಕಲೆ ಮತ್ತು ಮನೋವಿಕಾಸ

Author : ಸಿ.ಆರ್. ಚಂದ್ರಶೇಖರ್

Pages 50

₹ 5.00




Year of Publication: 1995
Published by: ಕರ್ನಾಟಕ ಲಲಿತಕಲಾ ಅಕಾಡೆಮಿ
Address: ನೃಪತುಂಗ ರಸ್ತೆ, ಬೆಂಗಳೂರು- 560002

Synopsys

ಕರ್ನಾಟಕ ಲಲಿತಕಲಾ ಅಕಾಡೆಮಿಯ ಜನಪ್ರಿಯ ಕಲಾಮಾಲಿಕೆಯಲ್ಲಿ ಪ್ರಕಟವಾದ ಕೃತಿ ‘ಚಿತ್ರಕಲೆ ಮತ್ತು ಮನೋವಿಕಾಸ’. ಕಲೆ ಹಾಗೂ ಜನಸಾಮಾನ್ಯರ ನಡುವೆ ಭಾರೀ ಅಂತರವಿದೆ, ಸಮಕಾಲೀನ ಕಲೆಯು ಜನಸಾಮಾನ್ಯರಿಗೆ ಅರ್ಥವಾಗದಿರುವುದೇ ಇದಕ್ಕೆ ಕಾರಣ ಎಂದು ಹಲವರ ಅಭಿಪ್ರಾಯ. ದೃಶ್ಯ ಕಲೆಗಳನ್ನು ಅಸ್ವಾದಿಸುವ ದೃಷ್ಟಿಯಿಂದ ನಮ್ಮ ಸಾಮಾನ್ಯ ಶಿಕ್ಷಣದಲ್ಲೂ ಗಂಭೀರ ಪ್ರಯತ್ನಗಳು ನಡೆಯುತ್ತಿಲ್ಲ. ಅಂತೆಯೇ ಈ ಕೊರತೆಗಳನ್ನು ಸ್ವಲ್ಪವಾದರೂ ತುಂಬುವುದು ಈ ಮಾಲಿಕೆಯ ಮುಖ್ಯ ಆಶಯ. ಈ ನಿಟ್ಟಿನಲ್ಲಿ ಚಿತ್ರಕಲೆ ಮತ್ತು ಮನೋವಿಕಾಸ ಕೃತಿ ರೂಪುಗೊಂಡಿದೆ. ಇದರಲ್ಲಿ ದೃಶ್ಯಕಲೆಯ ತಾತ್ವಿಕ ಅಂಶಗಳು, ಮಾಧ್ಯಮಗಳು, ತಂತ್ರಗಳು, ಇತಿಹಾಸ, ಆಧುನಿಕ ಕಲಾ ಪಂಥಗಳು ಸೇರಿದಂತೆ ಹಲವು ವಿಷಯಗಳು ವಿವರಿಸಲ್ಪಟ್ಟಿವೆ.

About the Author

ಸಿ.ಆರ್. ಚಂದ್ರಶೇಖರ್
(12 December 1948)

ಡಾ. ಸಿ.ಆರ್. ಚಂದ್ರಶೇಖರ್  ಅಂತಾರಾಷ್ಟ್ರೀಯ ಖ್ಯಾತಿ ಪಡೆದಿರುವ ರಾಷ್ಟ್ರೀಯ ಮನೋರೋಗ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ ಉಪ ಆರೋಗ್ಯ ಅಧೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮನೋವಿಜ್ಞಾನ ಕ್ಷೇತ್ರದಲ್ಲಿ ಸಾಮಾಜಿಕ ಕಳಕಳಿಯುಳ್ಳ ಹಿರಿಯ ವೈದ್ಯರು ರೋಗಿಗಳ ಶುಶ್ರೂಷೆ,  ಬೋಧನೆ ಮತ್ತು ತರಬೇತಿ ನೀಡುತ್ತಿರುವುದರ ಜೊತೆಗೆ ಕಳೆದ 30 ವರ್ಷಗಳಿಂದ ನಿರಂತರ ಸೇವೆ ಸಲ್ಲಿಸುತ್ತಿದ್ದಾರೆ. 150 ಕ್ಕೂ ಹೆಚ್ಚು ಮನೋವಿಜ್ಞಾನದ ಬಗ್ಗೆ ಕನ್ನಡದಲ್ಲಿ ರಚಿಸಿರುವ ಇವರ ಹಲವು ಪುಸ್ತಕಗಳು ತೆಲುಗು, ಉರ್ದು, ಗುಜರಾತಿ, ಹಿಂದಿ ಭಾಷೆಗಳಿಗೆ ಅನುವಾದಗೊಂಡಿವೆ. 1000 ಕ್ಕೂ ಹೆಚ್ಚು  ಪ್ರೌಢ ಲೇಖನಗಳನ್ನು ಬರೆದಿದ್ದಾರೆ. ...

READ MORE

Related Books