ಚಿಟ್ಟಾಣಿ ರಾಮಚಂದ್ರ ಹೆಗಡೆ ನಾಡಿನ ಹೆಸರಾಂತ ಯಕ್ಷಗಾನ ಕಲಾವಿದರು. ಇವರ ಅನನ್ಯ ಕಲಾ ಸೇವೆಗೆ ಕೇಂದ್ರ ಸರ್ಕಾರ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿದೆ. ಕೌರವ, ದುಷ್ಟಬುದ್ಧಿ, ಭಸ್ಮಾಸುರ ಸೇರಿದಂತೆ ವಿವಿಧ ಪಾತ್ರಗಳಲ್ಲಿ, ಅದರಲ್ಲಿಯೂ ಖಳನಾಯಕನ ಪಾತ್ರದಲ್ಲಿ ನಟಿಸುತ್ತಿದ್ದರು.
ವಿಶಿಷ್ಟ ನರ್ತನ, ಲಯಗಾರಿಕೆ, ಅಭಿನಯ ಕೌಶಲಗಳಿಂದ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ, ಜನಪದಶ್ರೀ, ಕಾರ್ಕಿ ವೆಂಕಟರಮಣ ಶಾಸ್ತ್ರಿ ಪ್ರಶಸ್ತಿ, ಶಿವರಾಮ ಕಾರಂತ ಪ್ರಶಸ್ತಿ, ಆಳ್ವಾಸ್ ನುಡಿಸಿರಿ, ಕೆರೆಮನೆ ಶಿವರಾಮ ಹೆಗಡೆ ಪ್ರಶಸ್ತಿಗಳು ಸಂದಿವೆ. ಇಂತಹ ಕಲಾ ಪ್ರತಿಭೆಯ ವ್ಯಕ್ತಿಚಿತ್ರಣವನ್ನು ಸಂಪಾದಿಸಿ ಹೊರತಂದಿರುವ ಕೃತಿ ಅಪೂರ್ವವಾದುದು.
ಹಿರಿಯ ಲೇಖಕ ಜಿ.ಎಸ್ ಭಟ್ (ಮೈಸೂರು). 1943, ಮೇ 6 ರಂದು ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಜನನ. ತಂದೆ ಸುಬ್ಬರಾಯ ಭಟ್, ತಾಯಿ ಸರಸ್ವತಿ. ಕಲಾವಿದರಾಗಿರುವ ಜಿ.ಎಸ್.ಭಟ್ ಸಾಹಿತ್ಯ ಕ್ಷೇತ್ರದಲ್ಲಿ ವಿಶೇಷ ಆಸಕ್ತಿಯನ್ನು ಹೊಂದಿದ್ದಾರೆ. ಅವರು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಿಂದ ಇತಿಹಾಸದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುತ್ತಾರೆ. ಸಾಹಿತಿ ಪ್ರೊ.ದೇಜಗೌ ಅವರಿಂದ ಪ್ರೇರಿತರಾಗಿ 1969ರಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ಮಾನವಿಕ ವಿಭಾಗಕ್ಕೆ ವಿಶ್ವಕೋಶದ ಸಂಪಾದಕರಾಗಿ ಸೇರಿದರು. ಅಷ್ಟೇ ಅಲ್ಲದೆ ವಿಶ್ವವಿದ್ಯಾನಿಲಯದೊಂದಿಗೆ 33 ವರ್ಷಗಳ ಅವಧಿಯಲ್ಲಿ ವಿಶ್ವಕೋಶದ 14 ಸಂಪುಟಗಳನ್ನು ಹೊರತಂದ ಕೀರ್ತಿಯು ಅವರಿಗೆ ಸಲ್ಲುತ್ತದೆ. ನಿವೃತ್ತಿಯ ನಂತರವೂ ಭಟ್ ಕನ್ನಡ ವಿಶ್ವಕೋಶದ ಕೆಲಸವನ್ನು ಮುಂದುವರೆಸಿದರು. ಯಕ್ಷಗಾನ ಮತ್ತು ಬಯಲಾಟ ಸೇರಿದಂತೆ 75 ...
READ MORE