ಕೊರೋನ ಹೆದರದಿರೋಣ-ಲೇಖಕ ಶ್ರೀನಿವಾಸ ಕಕ್ಕಿಲ್ಲಾಯ ಬೇವಿಂಜೆ ಹಾಗೂ ಬಾಲಸರಸ್ವತಿ ಪಣಂಬೂರು ಅವರ ಕೃತಿ. ಕೊರೋನ ವೈರಾಣು ಇತಿಹಾಸ, ಹಬ್ಬುವಿಕೆ, ತೆಗೆದುಕೊಳ್ಳಬೇಕಾದ ಮುಂಜಾಗ್ರತೆ ಕುರಿತು ಜಾಗೃತಿ ಮೂಡಿಸುವ ಬರಹಗಳನ್ನು ಒಳಗೊಂಡಿವೆ. ಕೊರೋನ ವೈರಾಣು ಕುರಿತು ಇರುವ ತಪ್ಪು ಗ್ರಹಿಕೆ ಹಾಗೂ ಅಭಿಪ್ರಾಯಗಳ ವಿರುದ್ಧ ವೈಜ್ಞಾನಿಕ ಜಾಗೃತಿ ಮೂಡಿಸುವುದು ಈ ಕೃತಿಯ ಉದ್ದೇಶವಾಗಿದೆ.
ಮಂಗಳೂರಿನ ಸ್ಪಂದನಾ ಸೆಂಟರ್ ಫಾರ್ ಮೆಟಾಬಾಲಿಕ್ ಮೆಡಿಸಸಿನ್ ಕೇಂದ್ರದಲ್ಲಿ ವೈದ್ಯರಾಗಿರುವ ಡಾ. ಶ್ರೀನಿವಾಸ ಕಕ್ಕಿಲ್ಲಾಯ ಅವರು ಪ್ರೌಢಶಿಕ್ಷಣವನ್ನು ಮಂಗಳೂರಿನ ಕೆನರಾ ಪ್ರೌಢಶಾಲೆಯಲ್ಲಿ ಪಡೆದರು. ಮಂಗಳೂರಿನ ಕಸ್ತೂರಬಾ ಮೆಡಿಕಲ್ ಕಾಲೇಜಿನಲ್ಲಿ ಅಧ್ಯಯನ ನಡೆಸಿ ಎಂ.ಬಿ.ಬಿ.ಎಸ್. ಪದವಿ ಪಡೆದ ಶ್ರೀನಿವಾಸ ಅವರು ಹುಬ್ಬಳ್ಳಿಯ ಕರ್ನಾಟಕ ಮೆಡಿಕಲ್ ಕಾಲೇಜಿನಿಂದ 1992ರಲ್ಲಿ ಸ್ನಾತಕೋತ್ತರ (ಎಂ.ಡಿ.) ಪದವಿ ಪಡೆದರು. ಕರ್ನಾಟಕ ಏಕೀಕರಣಕ್ಕೆ ಶ್ರಮಿಸಿದವರಲ್ಲಿ ಒಬ್ಬರಾದ ಬಿ.ವಿ.ಕಕ್ಕಿಲ್ಲಾಯ ಅವರ ಪುತ್ರರಾಗಿರುವ ಶ್ರೀನಿವಾಸ ಅವರು ಕರ್ನಾಟಕ ವಿಧಾನಸಭೆಯಲ್ಲಿ ಬಿ.ವಿ. ಕಕ್ಕಿಲ್ಲಾಯ ಕೃತಿಯನ್ನು ಸಂಪಾದಿಸಿದ್ದಾರೆ. ...
READ MORE