ಲೇಕಕಿ ಉಮಾ ರಾವ್ ಅವರ ಕೃತಿ ದಲೈ ಲಾಮಾ. ವಸಂತ ಪ್ರಕಾಶನದ ವಿಖ್ಯಾತರ ವ್ಯಕ್ತಿತ್ವ ಮಾಲೆಯಡಿ ಪ್ರಕಟಿತ ಈ ಕೃತಿಯು ಬೌದ್ಧ ಧರ್ಮ ಪ್ರಚಾರಕ ದಲೈ ಲಾಮಾ ಅವರ ಬದುಕು-ಸಾಧನೆ-ಪ್ರಚಾರ-ಪ್ರಸಾರ-ಜೀವನ ಮೌಲ್ಯಗಳ ಸಂದೇಶ ಇತ್ಯಾದಿ ಕುರಿತ ವಿವರಣೆಗಳು ಒಳಗೊಂಡಿದೆ.
1948 ಸೆಪ್ಟಂಬರ್ 1ರಂದು ಜನಿಸಿದ ಇವರು ಜಾಹೀರಾತು ಉದ್ಯಮದಲ್ಲಿ ಕಾಪಿರೈಟರ್, ಪತ್ರಕರ್ತೆಯಾಗಿ ಬೆಂಗಳೂರಿನಲ್ಲಿ ಕೆಲಸ ನಿರ್ವಹಿಸಿದ್ದಾರೆ. ಸೃಜನಶೀಲ, ಪ್ರಗತಿಪರ ವಿಚಾರಧಾರೆಗಳನ್ನು ಪ್ರತಿಪಾದಿಸುವ, ಸೂಕ್ಷ್ಮ ಸಂವೇದನೆಯುಳ್ಳ ಲೇಖಕಿಯಾಗಿ ಮುಖ್ಯವೆನಿಸುತ್ತಾರೆ. 80ರ ದಶಕದಲ್ಲಿ, ಉಮಾರಾವ್ ರವರು 'ಫ್ರೀಲಾನ್ಸ್ ಕಾಪಿರೈಟರ್' ಹಾಗೂ 'ಜರ್ನಲಿಸ್ಟ್' ಆಗಿ ಕೆಲಸ ಮಾಡಲು ಪ್ರಾರಂಭಿಸಿದರು. ಉಮಾರವರ ಬರಹ, ಕಥೆಗಳು ಕನ್ನಡದ ಹಲವಾರು ದಿನಪತ್ರಿಕೆಗಳಲ್ಲಿ, ನಿಯತಕಾಲಿಕೆಗಳಲ್ಲಿ ಪ್ರಕಟವಾಗಿವೆ. ಕರ್ನಾಟಕ ಸಾಹಿತ್ಯ ಅಕಾಡೆಮಿ ಪುಸ್ತಕ ಬಹುಮಾನ, ಮಹಿಳಾ ವರ್ಷ ದತ್ತಿ ನಿಧಿ ಪ್ರಶಸ್ತಿ, ಗೊರುರು ಪ್ರಶಸ್ತಿ, ಕರ್ನಾಟಕ ಲೇಖಕಿಯರ ಸಂಘದ ಎಚ್.ವಿ ಸಾವಿತ್ರಮ್ಮ ಪ್ರಶಸ್ತಿ, ಮುಂಬೈ ಡೈರಿಗೆ ಬಹುಮಾನ ಲಭಿಸಿದೆ. ಅಗಸ್ತ್ಯ, ಕಾಡು ಹಾದಿ, ...
READ MORE