ಲೇಖಕ, ಚಿಂತಕ ಡಾ. ವಿ. ಮುನಿವೆಂಕಟಪ್ಪ ಅವರ ಕೃತಿ-ದಲಿತ ಸಾಹಿತ್ಯ ಚರಿತ್ರೆ ಸಂಪುಟ-15. ಸಾಹಿತ್ಯ ಮತ್ತು ಚಳವಳಿಯನ್ನು ವಿಭಿನ್ನ ನೆಲೆಯೊಳಗೆ ನೋಡುವುದು ಶಾಸ್ತ್ರೀಯವಾಗಿ ಅಸಾಧ್ಯ. ಅಂತೆಯೇ, ದಲಿತ ಸಾಹಿತ್ಯ ಹಾಗೂ ದಲಿತ ಚಳವಳಿಯನ್ನು ಬೇರೆ ಬೇರೆಯಾಗಿ ನೋಡುವಂತಿಲ್ಲ. ಸ್ವತಃ ಲೇಖಕರು ದಲಿತ ಚಳವಳಿಯಲ್ಲಿ ಪಾಲ್ಗೊಂಡಿದ್ದು ತಮ್ಮ ಅನುಭವನಗಳನ್ನು ಸರಣಿ ರೂಪದಲ್ಲಿ ವ್ಯಕ್ತಪಡಿಸಲು ಇಲ್ಲಿ ಸಾಧ್ಯವಾಗಿದೆ. ರಾಜ್ಯದ ಬೇರೆ ಬೇರೆ ಲೇಖಕರಿಂದ ಹರಿದು ಬಂದ ಬರೆಹಗಳ ವಿಚಾರವನ್ನು ಇಲ್ಲಿ ಸಂಪಾದಿಸಿದ್ದಾರೆ.
ಲೇಖಕ, ಚಿಂತಕ ವಿ. ಮುನಿವೆಂಕಟಪ್ಪ ಅವರು ಸೈದ್ಧಾಂತಿಕ ಬದ್ಧತೆಯನ್ನು ಉಸಿರಾಗಿಸಿಕೊಂಡವರು. ಕೋಲಾರ ತಾಲೂಕಿನ ಎಡಹಳ್ಳಿಯವರು. ಕೃತಿಗಳು: ಮಹಿಳಾ ಸಬಲೀಕರಣ, ದಲಿತ ಚಳವಳಿ: ಒಂದು ಅವಲೋಕನ, ಸಾಮಾಜಿಕ ದಾರ್ಶನಿಕರು, ವಿಶ್ವಚೇತನ ಬುದ್ಧ, ಮಹಾ ಮಾನವ ಬುದ್ಧ, ಮಹಾಮಾನವ ಬಸವಣ್ಣ, ಶರಣಧರ್ಮ ಚರಿತ್ರೆ, ದಲಿತ ಚಳವಳಿ ಮತ್ತು ಇತರೆ ಲೇಖನಗಳು ಬಹುಜನ ಭಾರತ, ಬಹುಜನ ಚಳವಳಿ, ಬಹುಜನ ಸಮಾಜ, ಅಂಬೇಡ್ಕರ ಪರಿಕಲ್ಪನೆ ಹೀಗೆ ಹತ್ತು ಹಲವು ಕೃತಿಗಳ ಮೂಲಕ ಓದುಗರ ಸ್ವಾಭಿಮಾನವನ್ನು ಬಡಿದೆಬ್ಬಿಸುತ್ತಾರೆ. ದಲಿತ ಚಳವಳಿ ನಡೆದು ಬಂದ ದಾರಿಯ ಚರಿತ್ರೆಯನ್ನು ಸುಮಾರು 17 ಸಂಪುಟಗಳಲ್ಲಿ ದಾಖಲಿಸಿದ್ದು ಇವರ ಓದಿನ ...
READ MORE