‘ದಲಿತ ಚಳುವಳಿ ಮತ್ತು ಸಾಹಿತ್ಯ’ ಕೃತಿಯು ವಿ. ಮುನಿವೆಂಕಟಪ್ಪ ಅವರ ಬರೆದ ವಿಮರ್ಶಾ ಬರಹಗಳ ಕೃತಿ. ಈ ಲೇಖನಗಳಲ್ಲಿ ಮುಖ್ಯವಾಗಿ ದಲಿತ ಚಳವಳಿ ಹಾಗೂ ಸಾಹಿತ್ಯ ಕುರಿತ ಚರ್ಚೆಯಾಗಿದೆ. ಈ ಚಿಂತನೆಗಳಲ್ಲಿ ಒಂದು ನೈತಿಕವಾದ ಆಕ್ರೋಶ ಇರುವುದನ್ನು ನಾವು ಕಾಣಬಹುದು. ಇದು ಅನೇಕ ದೊಡ್ಡವರು ಎನ್ನಿಸಿಕೊಂಡವರ ತಪ್ಪು ನಿಲುವುಗಳಿಗೆ ಪ್ರತಿಯಾಗಿ ಹುಟ್ಟಿಕೊಂಡ ಸಿಟ್ಟು. ಈ ಸಿಟ್ಟಿನ ಹಿಂದೆ ನೋವು ಇದೆ ಎಂಬುದನ್ನು ಮರೆಯುವಂತಿಲ್ಲ. ಇದಕ್ಕೆ ಉದಾಹರಣೆಯಾಗಿ ಕವಿ ಸಿದ್ದಲಿಂಗಯ್ಯ ಅವರು `ನನ್ನನ್ನು ದಲಿತ ಕವಿ ಎಂದು ಕರೆಯಬೇಡಿ, ಕನ್ನಡದ ಕವಿ ಎಂದು ಕರೆಯಿರಿ’ ಎಂದು ಕೇಳಿಕೊಂಡಿರುವುದನ್ನು, ದಲಿತರು ತಾವು ನಡೆದುಬಂದ ದಾರಿಯನ್ನು ಹಿಂತಿರುಗಿ ನೋಡಲು ಸಿದ್ಧರಿಲ್ಲದಿರುವುದನ್ನು ತೋರಿದ್ದಾರೆ. ಇಂಥ ಅನೇಕ ಸಂದರ್ಭಗಳನ್ನು ಮುನಿವೆಂಕಟಪ್ಪನವರು ಇಲ್ಲಿನ ಪುಟಗಳಲ್ಲಿ ತೆರೆದಿಟ್ಟಿದ್ದಾರೆ.
ಲೇಖಕ, ಚಿಂತಕ ವಿ. ಮುನಿವೆಂಕಟಪ್ಪ ಅವರು ಸೈದ್ಧಾಂತಿಕ ಬದ್ಧತೆಯನ್ನು ಉಸಿರಾಗಿಸಿಕೊಂಡವರು. ಕೋಲಾರ ತಾಲೂಕಿನ ಎಡಹಳ್ಳಿಯವರು. ಕೃತಿಗಳು: ಮಹಿಳಾ ಸಬಲೀಕರಣ, ದಲಿತ ಚಳವಳಿ: ಒಂದು ಅವಲೋಕನ, ಸಾಮಾಜಿಕ ದಾರ್ಶನಿಕರು, ವಿಶ್ವಚೇತನ ಬುದ್ಧ, ಮಹಾ ಮಾನವ ಬುದ್ಧ, ಮಹಾಮಾನವ ಬಸವಣ್ಣ, ಶರಣಧರ್ಮ ಚರಿತ್ರೆ, ದಲಿತ ಚಳವಳಿ ಮತ್ತು ಇತರೆ ಲೇಖನಗಳು ಬಹುಜನ ಭಾರತ, ಬಹುಜನ ಚಳವಳಿ, ಬಹುಜನ ಸಮಾಜ, ಅಂಬೇಡ್ಕರ ಪರಿಕಲ್ಪನೆ ಹೀಗೆ ಹತ್ತು ಹಲವು ಕೃತಿಗಳ ಮೂಲಕ ಓದುಗರ ಸ್ವಾಭಿಮಾನವನ್ನು ಬಡಿದೆಬ್ಬಿಸುತ್ತಾರೆ. ದಲಿತ ಚಳವಳಿ ನಡೆದು ಬಂದ ದಾರಿಯ ಚರಿತ್ರೆಯನ್ನು ಸುಮಾರು 17 ಸಂಪುಟಗಳಲ್ಲಿ ದಾಖಲಿಸಿದ್ದು ಇವರ ಓದಿನ ...
READ MORE