ದಲಿತ ಸಂವೇದನೆಗಳ ಬೇರುಗಳನ್ನು ಜನಪದ ಸಾಹಿತ್ಯದಲ್ಲಿ ಗುರುತಿಸುವ ಪ್ರಯತ್ನವನ್ನು ಲೇಖಕ ಅಪ್ಪಗೆರೆ ಸೋಮಶೇಖರ್ ಮಾಡಿದ್ದಾರೆ. ಜನಪದ ಹಾಡುಗಳಲ್ಲಿ ದಲಿತರ ನೋವನ್ನು ಕಂಡವರು. ಅಂಬೇಡ್ಕರ್ ಅವರ ಚಿಂತನೆಗಳ ಬರಹಗಳ ಹಿನ್ನೆಲೆಯಲ್ಲಿ ಈ ಕೃತಿಯೂ ರೂಪುಗೊಂಡಿದೆ. ಕೇರಳದ ಅಯ್ಯನ್ ಕಾಳಿ, ಬಡವರ ಭರಣಯ್ಯ, ದಲಿತ ರಾಜಕಾರಣದ ಸಾಕ್ಷಿ ಪ್ರಜ್ಷೆ ಕೋಲಾರ ಟಿ. ಚನ್ನಯ್ಯ, ಬಿ. ಬಸವಲಿಂಗಪ್ಪ, ಆಧುನಿಕ ಕನ್ನಡ ದಲಿತ ಸಾಹಿತ್ಯದ ಜಲಕಣ್ಣು ಡಿ.ಗೋವಿಂದದಾಸ್ ಮುಂತಾದ ಪ್ರಮುಖ ದಲಿತ ಚಿಂತಕರ ವ್ಯಕ್ತಿತ್ವವನ್ನು ಲೇಖಕರು ಇಲ್ಲಿ ಚಿತ್ರಿಸಿದ್ದಾರೆ. ದಲಿತ ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಜಾತಿಯ ಕಾರಣಕ್ಕಾಗಿ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಅನುಭವಿಸುತ್ತಿರುವ ಸಮಸ್ಯೆಗಳ ಕುರಿತು ಕೃತಿಯಲ್ಲಿ ವಿವರಗಳನ್ನು ಒದಗಿಸಿದ್ದಾರೆ.
ರಾಮನಗರ ಜಿಲ್ಲೆಯ, ಚನ್ನಪಟ್ಟಣ ತಾಲ್ಲೂಕಿನ, ಅಪ್ಪಗೆರೆ ಗ್ರಾಮದ ಡಾ. ಅಪ್ಪಗೆರೆ ಸೋಮಶೇಖರ್ ಅವರು ಮೈಸೂರು ವಿಶ್ವವಿದ್ಯಾಲಯದಿಂದ ಕನ್ನಡ ಎಂ.ಎ. ಪದವಿಯನ್ನು 7ನೇ ರಾಂಕ್ ಪಡೆದು ಪಾಸಾದವರು. ’ಡಾ. ಸಿದ್ದಲಿಂಗಯ್ಯ ಅವರ ಜೀವನ ಮತ್ತು ಸಾಹಿತ್ಯ : ಒಂದು ಅಧ್ಯಯನ” ಎಂಬ ವಿಷಯ ಕುಳಿತು ಸಂಶೋಧನೆ ನಡೆಸಿ, 2008ರಲ್ಲಿ ಮೈಸೂರು ವಿಶ್ವವಿದ್ಯಾಲಯದಿಂದ ಪಿಎಚ್.ಡಿ. ಪದವಿ ಪಡೆದಿದ್ದಾರೆ. ನಡೆವ ನಡೆ (ವಿಮರ್ಶೆ), ಮೌನ ಮಾತು ಪ್ರತಿಭಟನೆ (ವಿಮರ್ಶೆ), ಡಾ. ರಾಜಕುಮಾರ್, ಸುಟ್ಟಾವು ಬೆಳ್ಳಿ ಕಿರಣ (ವಿಮರ್ಶೆ), ತನು ಮುಟ್ಟದ ಮುನ್ನ(ವಿಮರ್ಶೆ), ಸಂಬಜ ಅನ್ನೋದು ದೊಡ್ಡದು ಕನಾ, ಬಡವರ ನಗುವಿನ ಶಕ್ತಿ ...
READ MORE