ಮಲ್ಲಿಗೆಯ ಕವಿ ಕೆಎಸ್‌ನ ಅವರ ಪತ್ನಿ ವೆಂಕಮ್ಮ ಅವರ ಸ್ಮರಣಾರ್ಥ ನೀಡುವ 'ನಿನ್ನೊಲುಮೆಯಿಂದಲೇ' ಗೌರವ ಪುರಸ್ಕೃತ ಶ್ರೀಮತಿ ಪ್ರೇಮಲೀಲಾ ಎಸ್. ಜಿ. ಸಿದ್ಧರಾಮಯ್ಯ ಅವರ ಕುರಿತ ಪುಸ್ತಕ ’ದೇಹದ ನಂಟಿನ ತುದಿಯ ಪ್ರೇಮದ ಹೂ’.ಲೇಖಕಿಯರಾದ ಪಿ. ಚಂದ್ರಿಕಾ ಮತ್ತು ಡಿ. ಸಿ. ಗೀತಾ ಕೃತಿಯನ್ನು ಹೊರತಂದಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಚಳ್ಳೆಕೆರೆಯಲ್ಲಿ ಜನಿಸಿದ ಚಂದ್ರಿಕಾ ಅವರು, ಕುವೆಂಪು ವಿಶ್ವವಿದ್ಯಾಲಯದಲ್ಲಿ ತಮ್ಮ ವ್ಯಾಸಂಗವನ್ನು ನಡೆಸಿದರು. ‘ಕನ್ನಡ ಸಾಹಿತ್ಯ ವಿಮರ್ಶೆಯ ಐತಿಹಾಸಿಕ ಅಧ್ಯಯನ’ ಇವರ ಪಿಎಚ್. ಡಿ ಪ್ರಬಂಧ. ಹಲವಾರು ಕಿರುತೆರೆ ಧಾರಾವಾಹಿಗಳು ಮತ್ತು ಸಿನಿಮಾಗಳಿಗೆ ಕಥಾ ವಿಸ್ತರಣೆ, ಸಂಭಾಷಣೆ, ಕಿರುಚಿತ್ರಗಳ ನಿರ್ದೇಶನ, ನಿರ್ಮಾಣ, ನಿರ್ವಹಣೆ, ರಾಜ್ಯಮಟ್ಟದ ವಿಚಾರ ಸಂಕಿರಣ, ವಿಚಾರಗೋಷ್ಠಿಗಳಲ್ಲಿ ಪ್ರಬಂಧ ಮಂಡನೆ, ಕವಿತಾ ವಾಚನ, ಅಭಿನವ ಚಾತುರ್ಮಾಸಿಕ ಪತ್ರಿಕೆಯ ಸಹ ಸಂಪಾದಕಿಯಾಗಿ, ಕೇಂದ್ರ ಸಾಹಿತ್ಯ ಅಕಾಡೆಮಿಯ ಕನ್ನಡ ಸಲಹಾ ಸಮಿತಿಯ ಸದಸ್ಯೆಯಾಗಿ ಕೆಲಸ ನಿರ್ವಹಣೆ ಮಾಡಿದ ಅನುಭವ ಲೇಖಕಿಯದು. ನಿಮ್ಮ ಚರಿತ್ರೆಯಲ್ಲಿ ನಮಗೆ ಜಾಗವಿಲ್ಲ, ಸೂರ್ಯಗಂಧೀ ...
READ MORE