ದೆವ್ವ, ಭೂತಗಳಿರುವುದು ನಿಜಕ್ಕೂ ಸತ್ಯವಾ? ದೆವ್ವ ಮೈ ಮೇಲೆ ಬರುತ್ತದೆಯೆ? ಅದಕ್ಕೆಲ್ಲವೂ ವೈಜ್ಞಾನಿಕ ಕಾರಣಗಳು ಏನಿದೆ ಎಂಬುದನ್ನು ಸಂಕ್ಷಿಪ್ತವಾಗಿ ಲೇಖಕರು ತಿಳಿಸಿದ್ದಾರೆ. ದೆವ್ವ ಹಿಡಿದಾಗ, ವ್ಯಕ್ತಿ ಕೂಗಾಡುತ್ತಾನೆ, ಕಿರಿಚಾಡುತ್ತಾನೆ, ಹಿಂಸೆ ಪಡುವುದು ಅಥವಾ ಹಿಂಸಿಸುವುದರ ಹಿಂದಿನ ಕಾರಣಗಳೇನು ಹೀಗೆ ಅನೇಕ ವಿಷಯ, ವಿಚಾರಗಳನ್ನು ಈ ಪುಸ್ತಕ ಒಳಗೊಂಡಿದೆ.
ಡಾ. ಸಿ.ಆರ್. ಚಂದ್ರಶೇಖರ್ ಅಂತಾರಾಷ್ಟ್ರೀಯ ಖ್ಯಾತಿ ಪಡೆದಿರುವ ರಾಷ್ಟ್ರೀಯ ಮನೋರೋಗ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ ಉಪ ಆರೋಗ್ಯ ಅಧೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮನೋವಿಜ್ಞಾನ ಕ್ಷೇತ್ರದಲ್ಲಿ ಸಾಮಾಜಿಕ ಕಳಕಳಿಯುಳ್ಳ ಹಿರಿಯ ವೈದ್ಯರು ರೋಗಿಗಳ ಶುಶ್ರೂಷೆ, ಬೋಧನೆ ಮತ್ತು ತರಬೇತಿ ನೀಡುತ್ತಿರುವುದರ ಜೊತೆಗೆ ಕಳೆದ 30 ವರ್ಷಗಳಿಂದ ನಿರಂತರ ಸೇವೆ ಸಲ್ಲಿಸುತ್ತಿದ್ದಾರೆ. 150 ಕ್ಕೂ ಹೆಚ್ಚು ಮನೋವಿಜ್ಞಾನದ ಬಗ್ಗೆ ಕನ್ನಡದಲ್ಲಿ ರಚಿಸಿರುವ ಇವರ ಹಲವು ಪುಸ್ತಕಗಳು ತೆಲುಗು, ಉರ್ದು, ಗುಜರಾತಿ, ಹಿಂದಿ ಭಾಷೆಗಳಿಗೆ ಅನುವಾದಗೊಂಡಿವೆ. 1000 ಕ್ಕೂ ಹೆಚ್ಚು ಪ್ರೌಢ ಲೇಖನಗಳನ್ನು ಬರೆದಿದ್ದಾರೆ. ...
READ MORE