ಲೇಖಕಿ ಹೆಚ್ ಎಸ್ ಮುಕ್ತಾಯಕ್ಕ ಅವರ ಉಪನ್ಯಾಸದ ಕೃತಿ- ‘ಢಕ್ಕೆಯ ಬೊಮ್ಮಣ್ಣ’ ಈ ಕೃತಿಗೆ ಮುನ್ನುಡಿ ಬರೆದ ಡಾ. ಡಿ. ಎಂ. ನಂಜುಡಪ್ಪ ’ಕರ್ನಾಟಕ ವಿಶ್ವವಿದ್ಯಾಲಯವು ತನ್ನ ಪ್ರಸಾರಾಂಗದ ಮುಖಾಂತರ ಕೈಕೊಂಡು ನಡೆಸುತ್ತಿರುವ ಜ್ಞಾನಪ್ರಸಾರದ ಯೋಜನೆಗಳಲ್ಲಿ ಈ 'ಉಪನ್ಯಾಸ ಗ್ರಂಥಮಾಲೆ' ಅತ್ಯಂತ ಮುಖ್ಯವೂ, ಜನಪ್ರಿಯವೂ ಆಗಿರುವುದು ಹೆಮ್ಮೆಯ ಮಾತಾಗಿದೆ. ವಿಶ್ವವಿದ್ಯಾಲಯದ ಆಡಳಿತ ಕ್ಷೇತ್ರದಲ್ಲಿರುವ ನಾಲ್ಕು ಜಿಲ್ಲೆ ಗಳಲ್ಲಿ ಉಪನ್ಯಾಸ ಶಿಬಿರಗಳನ್ನು ಏರ್ಪಡಿಸಲಾಗುತ್ತಿದ್ದು, ವಿಶ್ವವಿದ್ಯಾಲಯದ ಮತ್ತು ಇದಕ್ಕೆ ಸೇರಿದ ಕಾಲೇಜುಗಳ ಪ್ರಾಧ್ಯಾಪಕರು ಸಾಹಿತ್ಯ, ವಿಜ್ಞಾನ, ಸಾಮಾಜಿಕಶಾಸ್ತ್ರ ಮೊದಲಾದ ಶಾಖೆಗಳಿಗೆ ಸಂಬಂಧಪಟ್ಟ ವಿಷಯಗಳನ್ನು ಆಯ್ದುಕೊಂಡು, ಶಾಸ್ತ್ರ ಸಮ್ಮತವಾದ ಸರಣಿಯಲ್ಲಿ ಜನಸಾಮನ್ಯರಿಗೆ ತಿಳಿಯುವ ಶೈಲಿಯಲ್ಲಿ ಈ ಶಿಬಿರಗಳಲ್ಲಿ ಉಪನ್ಯಾಸಗಳನ್ನು ಕೊಡುತ್ತಾರೆ. ಈ ಜ್ಞಾನಪ್ರಸಾರ ಕಾರ್ಯದಲ್ಲಿ ಭಾಗವಹಿಸುವದರಿಂದ ವಿಶ್ವವಿದ್ಯಾಲಯದ ಹಾಗೂ ಕಾಲೇಜುಗಳ ಅಧ್ಯಾಪಕರಿಗೆ ಆಯಾ ಪ್ರದೇಶದ ಜನತೆಯೊಡನೆ ಹೆಚ್ಚಿನ ಸಂಪರ್ಕ ಒದಗುವುದಲ್ಲದೆ ಎಂತಹ ವಿಷಯವನ್ನಾದರೂ ಕನ್ನಡದಲ್ಲಿ ತಿಳಿಸಿ ಹೇಳುವ ಹಾಗೂ ಅದನ್ನು ಸುಲಭ ಶೈಲಿಯಲ್ಲಿ ಬರವಣಿಗೆಯಲ್ಲಿಳಿಸುವ ಅವಕಾಶ ದೊರೆಯುತ್ತದೆ. ಇದು ನಾಡಿನ ಪ್ರಗತಿಯ ಚಿನ್ಹೆ ಎಂದು ಭಾವಿಸುತ್ತೇನೆ’ ಎಂದಿದ್ದಾರೆ.
©2024 Book Brahma Private Limited.