ಬೌದ್ಧ ವಿದ್ವಾಂಸ, ಪಾಲಿ ಭಾಷಾ ತಜ್ಞ, ಆಚಾರ್ಯ ಧರ್ಮಾನಂದ ಕೊಸಾಂಬಿ ಅವರು ಬೌದ್ಧ ಧರ್ಮವನ್ನು ಆಳವಾಗಿ ತಿಳಿಯಬೇಕೆಂಬ ಅದಮ್ಯ ಕಾತುರದಿಂದ ಭಾರತವನ್ನು ಬಿಟ್ಟು ಟಿಬೆಟ್, ಶ್ರೀಲಂಕಾ, ಬರ್ಮಾ ಮುಂತಾದ ದೇಶಗಳಲ್ಲಿ ಅಧ್ಯಯನ ನಡೆಸಿದ್ದರು. ಗಾಂಧೀಜಿಯವರ ಪ್ರಭಾವಕ್ಕೆ ಒಳಗಾಗಿ ಉಪ್ಪಿನ ಸತ್ಯಾಗ್ರಹದಲ್ಲಿ ಭಾಗವಹಿಸಿ ಸುಮಾರು ಆರು ವರ್ಷಗಳ ಕಾಲ ಸೆರೆವಾಸವನ್ನು ಅನುಭವಿಸಿದರು. ಇವರ ಬದುಕು - ಬರಹ ಸಾಧನೆಗಳ ಸಂಕ್ಷಿಪ್ತ ಪರಿಚಯವನ್ನು ಡಾ. ಗೀತಾ ಶೆಣೈ ಮಾಡಿದ್ದು, ಡಾ. ನಾ. ಸೋಮೇಶ್ವರ ಸಂಪಾದಿಸಿದ್ದಾರೆ.
ಗೀತಾ ಶೆಣೈ ಕನ್ನಡದ ಪ್ರಮುಖ ಲೇಖಕಿ. ಇವರು 1954 ಜೂಬ್ 13 ರಂದು ದಕ್ಷಿಣ ಜಿಲ್ಲೆಯಲ್ಲಿ ಜನಿಸಿದರು. ಹಂಪಿಯಿಂದ ಕನ್ನಡ ಭಾಷೆ ಮತ್ತು ಸಾಹಿತ್ಯದಲ್ಲಿ ಪಿಹೆಚ್.ಡಿ, ಪದವಿ ಪಡೆದಿದ್ದಾರೆ. ಇಂದಿರಾಗಾಂಧಿ ಮಹಿಳಾ ಅಧ್ಯಯನದಲ್ಲಿ ಸಿಡಬ್ಲ್ಯೂಇಡಿ ಕೋರ್ಸ್ ಮುಗಿಸಿದ್ದಾರೆ, ಜೀವನ ಚರಿತ್ರೆ, ಅನುವಾದ ಮತ್ತು ಮಹಿಳಾ ಅಧ್ಯಯನ ಇತ್ಯಾದಿ ಪ್ರಕಾರಗಳಲ್ಲಿ 20ಕ್ಕೂ ಹೆಚ್ಚು ಗ್ರಂಥಗಳನ್ನು ಪ್ರಕಟಿಸಿದ್ದಾರೆ. ಇವರ ಮೊದಲ ಕೃತಿ ಝುಂಪಾ ಲಾಹಿರಿಯವರ ಇಂಟರ್‍ಪ್ರಿಟರ್ ಆಫ್ ಮ್ಯಾಲಡೀಸ್ ಕಥಾಸಂಕಲನದ ಅನುವಾದ `ಬೇನೆಗಳ ದುಭಾಷಿ'. ಬೇನೆಗಳ ದುಭಾಷಿ, ಪರಿಸರ ಅರ್ಥಶಾಸ್ತ್, ಮಧ್ಯಕಾಲೀನ ಭಾರತ, ಸಮಾಜಶಾಸ್ತ್ರದ ಸ್ಥಾಪಕ ಪಿತಾಮಹರು, ಪ್ರಾರಂಭಿಕ ಹಂತದ ...
READ MORE