ಲೇಖಕ ಲಕ್ಷ್ಮೀ ಮಚ್ಚಿನಪ್ರಸಿದ್ಧ ಅವರ ಕೃತಿ ‘ಧರ್ಮಸ್ಥಳ’. ತೀರ್ಥಕ್ಷೇತ್ರ ಧರ್ಮಸ್ಥಳದ ಇತಿಹಾಸ, ವೈಶಿಷ್ಟ್ಯ, ಪ್ರವಾಸೋದ್ಯಮದ ಕುರಿತು ಬೆಳಕು ಚೆಲ್ಲುವ ಪುಸ್ತಕ ಇದಾಗಿದೆ. ಧರ್ಮಸ್ಥಳದಲ್ಲಿ ಈವರೆಗೆ ಆಡಳಿತ ನಡೆಸಿದ ಹೆಗ್ಗಡೆ ಪರಂಪರೆಯಿಂದ ತೊಡಗಿ ಈಗಿನ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು,ಅವರ ಸೇವಾ ಕ್ಷೇತ್ರಗಳು, ಮಂಜೂಷಾ ಮ್ಯೂಸಿಯಂ, ಹಸ್ತಪ್ರತಿ ಸಂಶೋಧನಾಲಯ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ರುಡ್‌ಸೆಟ್ ಸ್ವ ಉದ್ಯೋಗ ಯೋಜನೆ, ಪುರಾತನ ದೇವಾಲಯಗಳ ರಕ್ಷಣೆಯ ಧರ್ಮೋತ್ಥಾನ ಟ್ರಸ್ಟ್, ಸಾವಿರಾರು ಮಕ್ಕಳಿಗೆ ವಿದ್ಯಾದಾನ ಮಾಡುವ ಎಸ್‌ಡಿಎಂ ಎಜುಕೇಶನ್ ಸೊಸೈಟಿ ಹೀಗೆ ವಿವಿಧ ಅಂಗ ಸಂಸ್ಥೆಗಳ ವಿವರಗಳಿವೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಲಕ್ಷ್ಮೀ ಮಚ್ಚಿನ ಪ್ರಸ್ತುತ ಉಡುಪಿ ನಿವಾಸಿ. ಬೆಳ್ತಂಗಡಿ ತಾಲೂಕಿನಲ್ಲಿ ಪತ್ರಕರ್ತನಾಗಿ ತನ್ನ 20ನೆಯ ವಯಸ್ಸಿಗೆ ತೊಡಗಿಸಿಕೊಂಡು ಹೊಸದಿಗಂತ, ಸಂಯುಕ್ತ ಕರ್ನಾಟಕ, ವಿಜಯ ಕರ್ನಾಟಕದ ಬಳಿಕ ಉದಯವಾಣಿಯಲ್ಲಿ 2008ರಲ್ಲಿ ವರದಿಗಾರನಾಗಿ ಸೇರಿ ಹಿರಿಯ ವರದಿಗಾರನಾಗಿ ಕರ್ತವ್ಯ ನಿರ್ವಹಿಸಿ ಉಪಮುಖ್ಯ ವರದಿಗಾರನಾಗಿ ಕುಂದಾಪುರದಲ್ಲಿ 2018ರಿಂದ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದಾರೆ. ಗ್ರಾಮೀಣ ಪತ್ರಿಕೋದ್ಯಮದಲ್ಲಿ ಆಸಕ್ತಿ. ಕಳೆದ ಅಷ್ಟೂ ವರ್ಷಗಳಿಂದ ಗ್ರಾಮೀಣಾಭಿವೃದ್ಧಿ, ಗ್ರಾಮೀಣ ಅಭ್ಯುದಯಕ್ಕಾಗಿ , ಪರಿಸರ ಪೂರಕವಾಗಿ ಮಾಡಿದ ವರದಿಗಳು ನೂರಾರು. ಇದರಲ್ಲಿ ಫಲ ಕಂಡು ಗ್ರಾಮಾಂತರದ ಸಮಸ್ಯೆ, ಬವಣೆ ನೀಗಲ್ಪಟ್ಟಿದ್ದು ಉಲ್ಲೇಖನೀಯ. ಮಾನವಾಸಕ್ತ ...
READ MORE