ಜಿ. ರಾಮಕೃಷ್ಣ ವಿಚಾರವಾದಿ, ಚಿಂತಕ, ಸಾಹಿತಿ. ಕಾರ್ಲ್ ಮಾರ್ಕ್ಸ್‌ನ ಜೊತೆಗೆ ಭಗವದ್ಗೀತೆಯೊಂದಿಗೂ ಒಡನಾಡಬಲ್ಲವರು. ಮೈಸೂರು ವಿಶ್ವವಿದ್ಯಾಲಯದ ಯುಜಿಸಿ ರಿಸರ್ಚ್ ಫೆಲೊ ಆಗಿಯೂ, ಉಸ್ಮಾನಿಯಾ ವಿಶ್ವವಿದ್ಯಾಲಯದಲ್ಲಿ ಸಂಶೋಧನಾ ಸಹಾಯಕರಾಗಿ ಕಾರ್ಯನಿರ್ವಹಿಸಿದ್ದಾರೆ. ಮಹಾರಾಷ್ಟ್ರದ ಅಂಬೇಡ್ಕರ್ ಕಾಲೇಜಿನಲ್ಲಿ ಇಂಗ್ಲಿಷ್ ಪ್ರೊಫೆಸರಾಗಿ, ಬೆಂಗಳೂರಿನ ಬಸವನಗುಡಿ ನ್ಯಾಷನಲ್ ಕಾಲೇಜಿನಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾಗಿ, ಹಂಪಿ ವಿಶ್ವವಿದ್ಯಾಲಯದ ಸಂದರ್ಶಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ. ’ಮುನ್ನೋಟ, ವೈಚಾರಿಕ ಜಾಗೃತಿ, ದೇವಿಪ್ರಸಾದ್ ಮತ್ತು ಲೋಕಾಯತ ದರ್ಶನ. ವ್ಯಕ್ತಿಚಿತ್ರ-ಭಗತ್‌ಸಿಂಗ್, ಭೂಪೇಶಗುಪ್ತ, ಜೆಗೆವಾರ, ಲೆನಿನ್’ ಮೊದಲಾದವು ಇವರ ಪ್ರಕಟಿತ ಕೃತಿಗಳಾಗಿವೆ. ಮುನ್ನೋಟ, ಆಯತನ, ಭಾರತೀಯ ವಿಜ್ಞಾನದ ಹಾದಿ ಕೃತಿಗಳಿಗೆ ರಾಜ್ಯಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ. ’ಜಿ.ಮಾದೇಗೌಡ ಸಮಾಜ ಪ್ರಶಸ್ತಿ’ ಇವರಿಗೆ ಲಭಿಸಿದೆ.
ಪ್ರಸ್ತುತ ಕೃತಿಯ ಮೂಲಕ ಇವರನ್ನು ಪರಿಚಯಿಸಿರುವುದು ಲೇಖಕಿ ಡಾ. ಎನ್. ಗಾಯತ್ರಿ.
ಲೇಖಕಿ ಡಾ. ಎನ್. ಗಾಯತ್ರಿ ಮೂಲತಃ ಬೆಂಗಳೂರಿನವರು. 1957 ರ ಜನೆವರಿ 17 ರಂದು ಜನನ. ಸಾಹಿತ್ಯದಲ್ಲಿ ಎಂ.ಎ ಹಾಗೂ ಪಿಎಚ್.ಡಿ ಪದವೀಧರರು. ರಿಸರ್ವ್ ಬ್ಯಾಂಕಿನಲ್ಲಿ ಅಧಿಕಾರಿ.ಮಹಿಳಾ ಪರ ಚಿಂತಕಿ, ಜಾಗೃತಿ ಮಹಿಳಾ ಅಧ್ಯಯನ ಕೇಂದ್ರದ ಸ್ಥಾಪಕ ಕಾರ್ಯದರ್ಶಿಯಾಗಿ 25 ವರ್ಷ ಸೇವೆ ಸಲ್ಲಿಸಿದ್ದಾರೆ. 22 ವರ್ಷ ಕಾಲ 'ಅಚಲ' ಮಾಸಪತ್ರಿಕೆಯ ಸಂಪಾದಕಿಯಾಗಿದ್ದು ಮಹಿಳಾ ಹೋರಾಟಗಳಿಗೆ ಸೈದ್ಧಾಂತಿಕ ನೆಲೆ ಕಲ್ಪಿಸಿಕೊಟ್ಟವರು. ಈಗ 'ಹೊಸತು' ಪತ್ರಿಕೆಯ ಸಂಪಾದಕ ಬಳಗದಲ್ಲೂ ಕಾರ್ಯ ನಿರ್ವಹಿಸುತ್ತಿದ್ದಾರೆ. ಕೃತಿಗಳು 'ಮಹಿಳೆ: ಬಿಡುಗಡೆಯ ಹಾದಿಯಲ್ಲಿ’, 'ಮಹಿಳಾ ಚಳವಳಿಯ ಮಜಲುಗಳು’, 'ಮುಖಾಮುಖಿ', 'ಕ್ಲಾರಾ ಜೆಟ್ಕಿನ್, 'ಮಹಿಳಾ ಮೀಸಲಾತಿ' ಮತ್ತು 'ಲಿಂಗ ರಾಜಕಾರಣ', ಫ್ರೆಡರಿಕ್ ...
READ MORE