ಡಾ. ಜಿ.ಎಸ್. ಶಿವರುದ್ರಪ್ಪನವರ ಸಮಗ್ರ ಕಾವ್ಯ ಕುರಿತು ಕೃತಿ ಬಂದಿರುವಂತೆ ಅವರ ಗದ್ಯ ಬರೆಹವೂ ಸಹ ಸಾಹಿತ್ಯ ವಲಯದಲ್ಲಿ ಮಹತ್ವದ ಕೃತಿ ಎಂಬ ಹೆಗ್ಗಳಿಕೆ ಇದೆ. ಕವಿಯಾಗಿ ಈ ಜಗತ್ತನ್ನು ಕಂಡು ಕಾವ್ಯದಲ್ಲಿ ಬಣ್ಣಿಸಿದಂತೆ ಗದ್ಯ ಸ್ವರೂಪದ ಶೈಲಿಯೂ ಆಕರ್ಷಕವಾಗಿದೆ. ವಿಮರ್ಶೆ, ಕಥೆ-ಕಾದಂಬರಿ, ವಿದ್ವತ್ ಪೂರ್ಣ ಚಿಂತನೆಗಳ ಸರಣಿ ಈ ಕವಿಯ ವ್ಯಕ್ತಿತ್ವವನ್ನು ಕಟ್ಟಿಕೊಡುತ್ತವೆ. ಶಿವರುದ್ರಪ್ಪನವರು ಹಲವು ಪ್ರಕಾರಗಳಲ್ಲಿ ಬರೆದ ಸಾಹಿತ್ಯದ ಪೈಕಿ ಗದ್ಯವನ್ನು ಮಾತ್ರ ಇಲ್ಲಿ ಸಂಗ್ರಹಿಸಿ ಸಂಕಲಿಸಲಾಗಿದೆ.
ಸಮನ್ವಯ ಕವಿಗಳಲ್ಲಿ ಒಬ್ಬರು ಎಂದು ಗುರುತಿಸಲಾಗುವ ಡಾ.ಜಿ.ಎಸ್. ಶಿವರುದ್ರಪ್ಪ ಅವರು ವಿಮರ್ಶಕರಾಗಿಯೂ ಗಣನೀಯ ಸಾಧನೆ ಮಾಡಿದ್ದಾರೆ. ಗದ್ಯ-ಪದ್ಯಗಳೆರಡರಲ್ಲಿಯೂ ಮಾಗಿದ ಪ್ರತಿಭೆ ಅವರದು. ತಂದೆ ಗುಗ್ಗುರಿ ಶಾಂತವೀರಪ್ಪ ಮತ್ತು ತಾಯಿ ವೀರಮ್ಮ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ 1926ರ ಫೆಬ್ರುವರಿ 7ರಂದು ಜನಿಸಿದರು. ಶಾಲಾ ಉಪಾಧ್ಯಾಯರ ಮಗನಾದ ಜಿ.ಎಸ್.ಎಸ್ ಅವರು ಎಸ್.ಎಸ್.ಎಲ್.ಸಿ ಮುಗಿಯುತ್ತಿದ್ದಂತೆಯೇ ಬಡತನದ ಕಾರಣದಿಂದ ಸರಕಾರಿ ನೌಕರಿ ಹಿಡಿಯಬೇಕಾಯಿತು. ಗುಬ್ಬಿ ತಾಲ್ಲೂಕು ಕಚೇರಿಯಲ್ಲಿ ಗುಮಾಸ್ತರಾಗಿ ಸೇರಿದರು. ಆದರೆ ಓದಲೇಬೇಕೆಂಬ ಅದಮ್ಯ ಆಸೆಯಿಂದ ಕೆಲಸಕ್ಕೆ ವಿದಾಯ ಹೇಳಿ ಮೈಸೂರು ಮಹಾರಾಜ ಕಾಲೇಜಿನಲ್ಲಿ ಓದನ್ನು ಮುಂದುವರೆಸಿ ಬಿ.ಎ. ಪದವಿ (1949), ಸ್ವರ್ಣಪದಕದೊಂದಿಗೆ ...
READ MORE