ಡಾ. ಶಿವರಾಮ ಕಾರಂತರಲ್ಲಿ ಮೂಡಿರುವ ಸೂಕ್ತಿಗಳು ಹಾಗೂ ಜೀವನ ಸೂತ್ರಗಳನ್ನು ಸಂಪಾದಿಸಿರುವ ಬೆ. ಗೋ. ರಮೇಶ್ ಅವರ ಕೃತಿ ’ಡಾ. ಶಿವರಾಮ ಕಾರಂತ; ಸೂತ್ರಗಳು-ಸೂಕ್ತಿಗಳು’ . ಶಿವರಾಮ ಕಾರಂತರೇ ಹೇಳುವಂತೆ ಇಲ್ಲಿಯ ಬರೆಹಗಳು ಲಘು ಪ್ರಬಂಧಗಳು. ಈ ಹಿಂದೆ ಸ್ವದೇಶಾಭಿಮಾನಿ ಹಾಗೂ ಇತರೆ ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಅವುಗಳನ್ನು ಬೆ.ಗೋ.ರಮೇಶ್ ಅವರು ಈ ಕೃತಿಯಲ್ಲಿ ಸಂಗ್ರಹಿಸಿ ನೀಡಿದ್ದಾರೆ.
ಬೆ.ಗೋ. ರಮೇಶ್ ಮೈಸೂರು ಜಿಲ್ಲೆಯ ಕೆ.ಆರ್. ನಗರ ತಾಲ್ಲೂಕಿನ ದೊಡ್ಡ ಹನಸಗೆಯಲ್ಲಿ ಆಗಸ್ಟ್ 22 , 1945ರಲ್ಲಿ ಜನಿಸಿದರು. ತಂದೆ ಗೊವಿಂದರಾಜು, ತಾಯಿ ರಾಧಮ್ಮನವರು. ಅವರ ಪ್ರಾರಂಭಿಕ ಶಿಕ್ಷಣ ನಡೆದದ್ದು ಬೆಂಗಳೂರಿನ ಮಲ್ಲೇಶ್ವರಂ ಶಾಲೆಯಲ್ಲಿ. ಇಂಟರ್‌ಮೀಡಿಯೆಟ್ ಓದಿದ್ದು ಸರಕಾರಿ ಕಾಲೇಜಿನಲ್ಲಿ. ಮುಂದೆ ರಮೇಶರು ಹಾಸನದ ಮಲ್ನಾಡ್ ಎಂಜನಿಯರಿಂಗ್ ಕಾಲೇಜಿನಿಂದ ಬಿ.ಇ. ಪದವಿ ಪಡೆದರು. ಹೆಬ್ಬಾಳದ ಕೃಷಿ ವಿಶ್ವವಿದ್ಯಾಲಯದಲ್ಲಿ ಕೆಲಕಾಲ ಉದ್ಯೋಗ ನಿರ್ವಹಿಸಿದ ಬೆ. ಗೋ ರಮೇಶರು ಕರ್ನಾಟಕ ಪವರ್ ಕಾರ್ಪೋರೇಷನ್ನಿನಲ್ಲಿ ಸಹಾಯಕ ಎಂಜನಿಯರಾಗಿ, ಸಹಾಯಕ ಎಕ್ಸುಕ್ಯುಟಿವ್ ಎಂಜನಿಯರಾಗಿ, ಎಕ್ಸಿಕ್ಯುಟಿವ್ ಎಂಜನಿಯರಾಗಿ, ರಾಯಚೂರಿನ ಶಾಕೋತ್ಪನ್ನ ವಿದ್ಯುದಾಗಾರದಲ್ಲಿ ಸೇವೆ ಸಲ್ಲಿಸಿ ...
READ MORE