ಕವಿ ಸಿದ್ಧಲಿಂಗಯ್ಯ ಅವರ ಆತ್ಮಕತೆ ’ಊರು ಕೇರಿ’ಯ ಮೊದಲ ಎರಡು ಭಾಗಗಳು ಈ ಸಂಪುಟದಲ್ಲಿ ಸೇರಿವೆ. ಇದು ಸಿದ್ಧಲಿಂಗಯ್ಯ ಅವರ ಸಮಗ್ರ ಸಾಹಿತ್ಯದ ಎರಡನೆಯ ಸಂಪುಟ.
ಕೇವಲ ಕವಿ, ಸಾಹಿತಿ ಮಾತ್ರ ಆಗಿರದೆ ಸಿದ್ಧಲಿಂಗಯ್ಯನವರು ಹಲವು, ಚಳುವಳಿಗಳನ್ನು ರೂಪಿಸಿದ, ಮುನ್ನಡೆಸಿದ ಶಕ್ತಿಯೂ ಆಗಿದ್ದಾರೆ. ಬಂಡಾಯ, ರೈತ ಚಳುವಳಿ, ಬೂಸಾ ಚಳುವಳಿ ಇವೆಲ್ಲವುಗಳಲ್ಲಿ ಅವರ ಕ್ರಿಯಾಶೀಲ ಭಾಗವಹಿಸುವಿಕೆ ಕೆಲಸ ಮಾಡಿದೆ. ಸಿದ್ಧಲಿಂಗಯ್ಯನವರು ತಮ್ಮ ಜೀವನದುದ್ದಕ್ಕೂ ಕಂಡ ಅನುಭವಗಳನ್ನು ಅತ್ಯಂತ ಮಾರ್ಮಿಕವಾಗಿ ಈ ಕೃತಿಯಲ್ಲಿ ವಿವರವಾಗಿ ನಿರೂಪಿಸಿದ್ದಾರೆ.
ದಲಿತ ಕವಿ ಎಂದು ಗುರುತಿಸಲಾಗುವ ಡಾ. ಸಿದ್ಧಲಿಂಗಯ್ಯ ಅವರು ದಲಿತ-ಬಂಡಾಯ ಸಾಹಿತ್ಯ ಚಳುವಳಿಯ ಪ್ರಮುಖ ಕವಿ-ಹೋರಾಟಗಾರ. ಮಾಗಡಿಯಲ್ಲಿ 1954ರ ಫೆಬ್ರುವರಿ 3ರಂದು ಜನಿಸಿದರು. ತಾಯಿ ವೆಂಕಮ್ಮ- ತಂದೆ ದೇವಯ್ಯ. ಬಡತನದಲ್ಲಿಯೇ ಗ್ರಾಮೀಣ ಭಾಗದ ಶಾಲೆಗಳಲ್ಲಿ ತಮ್ಮ ಪ್ರಾರಂಭಿಕ ಶಾಲಾ ವಿದ್ಯಾಭ್ಯಾಸ ಮಾಡಿ ಎಂ.ಎ. ಪದವಿಗಳಿಸಿ ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ ಅಧ್ಯಾಪಕರಾಗಿ, ನಿರ್ದೇಶಕರಾಗಿ, ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ. ಡಾ. ಅಂಬೇಡ್ಕರ್ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದಲ್ಲಿ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದಲ್ಲಿ ಸೇವೆ ಸಲ್ಲಿಸಿದ ನಂತರ ಸಿದ್ಧಲಿಂಗಯ್ಯನವರು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾಗಿದ್ದರು. ನಡೆದ ಅಖಿಲ ಕರ್ನಾಟಕ ...
READ MORE