ಡಾ.ಸಿದ್ದಲಿಂಗಯ್ಯ ಕವಿ ಮಾತ್ರವಲ್ಲ, ರಾಜಕಾರಣಿ ಕೂಡ. ಅವರು ಸದನದಲ್ಲಿ ಆಡಿದ ಮಾತುಗಳು ಸಾಂಸ್ಕೃತಿಕವಾಗಿ ರಾಜಕೀಯವಾಗಿ ಮಹತ್ವದ್ದಾಗಿದ್ದವು. ದಮನಿತರ ಬಗ್ಗೆ ಅವರು ಪ್ರಶ್ನೆಗಳನ್ನು ಎತ್ತುತ್ತಿದ್ದ ರೀತಿ ದನಿ ಇಲ್ಲದವರಿಗೆ ದನಿಯಾಗುತ್ತಿದ್ದ ರೀತಿ ಅವರನ್ನು ಶಾಸಕರನ್ನಾಗಿ ಬಲ್ಲವರಿಗೆ ಗೊತ್ತು. ಅಂತಹ ಭಾಷಣಗಳ ಸಂಗ್ರಹವನ್ನು ಡಾ. ಸಿದ್ಧಲಿಂಗಯ್ಯ ಸಮಗ್ರ ಸಾಹಿತ್ಯ ಸಂಪುಟ ೫ರಲ್ಲಿ ಇಡಿಯಾಗಿ ಪ್ರಕಟಿಸಿದೆ ಕನ್ನಡ ಪುಸ್ತಕ ಪ್ರಾಧಿಕಾರ. ತಿಳಿಹಾಸ್ಯದಿಂದಲೂ ಕೂಡಿರುವ ಅವರ ಅನೇಕ ಮಾತುಗಳು ರಾಜಕಾರಣಕ್ಕೆ- ಸಮಾಜಕ್ಕೆ ಎಚ್ಚರಿಕೆಯ ಗಂಟೆಯಂತೆ ಇವೆ.
ದಲಿತ ಕವಿ ಎಂದು ಗುರುತಿಸಲಾಗುವ ಡಾ. ಸಿದ್ಧಲಿಂಗಯ್ಯ ಅವರು ದಲಿತ-ಬಂಡಾಯ ಸಾಹಿತ್ಯ ಚಳುವಳಿಯ ಪ್ರಮುಖ ಕವಿ-ಹೋರಾಟಗಾರ. ಮಾಗಡಿಯಲ್ಲಿ 1954ರ ಫೆಬ್ರುವರಿ 3ರಂದು ಜನಿಸಿದರು. ತಾಯಿ ವೆಂಕಮ್ಮ- ತಂದೆ ದೇವಯ್ಯ. ಬಡತನದಲ್ಲಿಯೇ ಗ್ರಾಮೀಣ ಭಾಗದ ಶಾಲೆಗಳಲ್ಲಿ ತಮ್ಮ ಪ್ರಾರಂಭಿಕ ಶಾಲಾ ವಿದ್ಯಾಭ್ಯಾಸ ಮಾಡಿ ಎಂ.ಎ. ಪದವಿಗಳಿಸಿ ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ ಅಧ್ಯಾಪಕರಾಗಿ, ನಿರ್ದೇಶಕರಾಗಿ, ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ. ಡಾ. ಅಂಬೇಡ್ಕರ್ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದಲ್ಲಿ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದಲ್ಲಿ ಸೇವೆ ಸಲ್ಲಿಸಿದ ನಂತರ ಸಿದ್ಧಲಿಂಗಯ್ಯನವರು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾಗಿದ್ದರು. ನಡೆದ ಅಖಿಲ ಕರ್ನಾಟಕ ...
READ MORE