ಕನ್ನಡ ಮತ್ತು ತುಳು ಭಾಷೆಯ ವಿದ್ವಾಂಸರಾಗಿರುವ ವಾಮನ ನಂದಾವರ ಅವರು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ನಂದಾವರ ಗ್ರಾಮದವರು. ಮಂಗಳೂರು ಸಂತ ಅಲೋಶಿಯಸ್ ಕಾಲೇಜು ಬಿ.ಎಸ್‌ಸಿ ಪದವಿ ಪಡೆದ ಅವರು ಮಂಗಳೂರು ಸರಕಾರಿ ಮಹಾವಿದ್ಯಾಲಯದಲ್ಲಿ ಬಿ.ಇಡಿ ಪದವಿ ಪೂರ್ಣಗೊಳಿಸಿದರು. ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡದಲ್ಲಿ ಎಂ.ಎ (ಕನ್ನಡ) ಪದವೀಧರರಾದ ಅವರು ಮಂಗಳೂರು ವಿಶ್ವವಿದ್ಯಾನಿಲಯದ ಬಿ.ಎ.ವಿವೇಕ ರೈಯವರ ಮಾರ್ಗದರ್ಶನದಲ್ಲಿ 'ಕೋಟಿ ಚೆನ್ನಯ ಜಾನಪದೀಯ ಅಧ್ಯಯನ’ ಮಹಾ ಪ್ರಬಂಧಕ್ಕೆ ಪಿಎಚ್.ಡಿ ಪದವಿ ಗಳಿಸಿದರು. ಬೆಂಗಳೂರುದ ಚನ್ನೇನಹಳ್ಳಿ ಜನಸೇವಾ ವಿದ್ಯಾಕೇಂದ್ರದಲ್ಲಿ ಸಹಾಯಕ ಅಧ್ಯಾಪಕರಾಗಿ ಶಿಕ್ಷಣ ವೃತ್ತಿ ಜೀವನ ಆರಂಭಿಸಿದ ಅವರು ಸೇಂಟ್ ಆನ್ಸ್ ಪ್ರೌಢಶಾಲೆಯ ಸಹಾಯಕ ಅಧ್ಯಾಪಕರಾಗಿ, ಸೇಂಟ್ ಆನ್ಸ್ ಮಹಿಳಾ ಶಿಕ್ಷಕ-ಶಿಕ್ಷಣ ತರಬೇತಿ ಕಾಲೇಜಿನಲ್ಲಿ ಉಪನ್ಯಾಸಕರಾಗಿ, ಮಂಗಳೂರು ವಿಶ್ವವಿದ್ಯಾಲಯದಲ್ಲಿ ಅತಿಥಿ ಉಪನ್ಯಾಸಕರಾಗಿ, ಸಹ್ಯಾದ್ರಿ ಶಿಕ್ಣಣ ಸಂಸ್ಥೆಯ ಸ್ಥಾಪಕ ಪ್ರಾಂಶುಪಾಲರಾಗಿ ಕಾರ್ಯ ನಿರ್ವಹಿಸಿದ್ದಾರೆ. ಇಂದಿರಾ ಗಾಂಧಿ ರಾಷ್ತ್ರೀಯ ಮುಕ್ತ ವಿಶ್ವವಿದ್ಯಾಲಯದ ಅಧ್ಯಯನ ಮಾರ್ಗದರ್ಶಕರಾಗಿದ್ದ ಅವರು ಪಿಲಿಕುಳ ನಿಸರ್ಗಧಾಮದ ಯೋಜನಾಧಿಕಾರಿ ಹಾಗೂ ಮಂಗಳೂರು ದರ್ಶನ ಯೋಜನೆಯಲ್ಲಿ ಸಹಾಯಕ ಸಂಪಾದಕರಾಗಿದ್ದಾರೆ. ತುಳು ಸಾಹಿತ್ಯ ಆಕಾಡೆಮಿಯ ಅಧ್ಯಕ್ಷ ಅವರಿಗೆ ಬಂಟ್ವಾಳ ತಾಲ್ಲೂಕು 12ನೆಯ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿದ್ದರು. ಅವರಿಗೆ ತುಳು ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ, ಪೊಳಲಿ ಶೀನಪ್ಪ ಹೆಗ್ಗಡೆ ಪ್ರಶಸ್ತಿ, ನಾಟಕ ಅಕಾಡೆಮಿ ಗೌರವ ಪ್ರಶಸ್ತಿ, ಕಾಂತಾವರ ಕನ್ನಡ ಸಂಘದ ಪುರಸ್ಕಾರ ದೊರೆತಿವೆ.ವಾಮನ ನಂದಾವರ ಅವರ ಜೀವನ ಸಾಧನೆಯನ್ನು ಪರಿಚಯಿಸುವ ಕೃತಿಯಿದು.
©2024 Book Brahma Private Limited.