ಭಾರತೀಯ ಕಮ್ಯುನಿಸ್ಟ್ ಇತಿಹಾಸದಲ್ಲಿ ಶ್ರಮಜೀವಿಗಳ ರಕ್ಷಣೆಗಾಗಿ ಹೋರಾಡಿದ ಬಡವರ ದಂಡನಾಯಕ ಅಯ್ಯಿಲ್ಯಾತ್ ಕುಟ್ಟಿಯಾರಿ ಗೋಪಾಲನ್ ಶಾಲಾ ಮಾಸ್ತರರಾಗಿದ್ದಾಗ ಮಹಾತ್ಮ ಗಾಂಧೀಜಿಯವರ ಕರೆಗೆ ಓಗೊಟ್ಟು ಸ್ವಾತಂತ್ರ್ಯ ಹೋರಾಟಕ್ಕೆ ಧುಮುಕಿದರು. ಅವರ ಹೋರಾಟದ ಬದುಕನ್ನು ಸಂಕ್ಷಿಪ್ತವಾಗಿ ನೀಡಿದ್ದಾರೆ ಲೇಖಕಿ ಪಾರ್ವತಿ ಜಿ. ಐತಾಳ್. ಮಕ್ಕಳನ್ನು ಗಮನದಲ್ಲಿಟ್ಟುಕೊಂಡು ರಚಿಸಿರುವ ಈ ಕೃತಿಯನ್ನು ನಾ. ಸೋಮೇಶ್ವರ ಸಂಪಾದಿಸಿದ್ದಾರೆ.
ಪಾರ್ವತಿ ಜಿ.ಐತಾಳ ಅವರು ಕಾಸರಗೋಡು ಜಿಲ್ಲೆಯ ಧರ್ಮತ್ತಡ್ಕ ಎಂಬ ಹಳ್ಳಿಯಲ್ಲಿ ಜುಲೈ 23, 1957ರಂದು ಜನಿಸಿದರು. 1981ರಲ್ಲಿ ಮೈಸೂರಿನ ಮಾನಸಗಂಗೋತ್ರಿಯಿಂದ ಇಂಗ್ಲಿಷ್ ಸಾಹಿತ್ಯದಲ್ಲಿ ಎಂ.ಎ. ಪದವಿ ಪಡೆದರು. 2012ರಲ್ಲಿ ಕಣ್ಣೂರು ವಿಶ್ವವಿದ್ಯಾನಿಲಯದಿಂದ ಪಿಎಚ್.ಡಿ ಪದವಿಯನ್ನು ಪಡೆದರು. ಮಂಗಳೂರು ಜಿಲ್ಲೆಯ ಮುಲ್ಕಿಯ ವಿಜಯಾ ಕಾಲೇಜಿನಲ್ಲಿ ಏಳು ವರ್ಷಗಳವರೆಗೆ ಪ್ರಾಧ್ಯಾಪಕಿಯಾಗಿ ದುಡಿದ ಪಾರ್ವತಿಯವರು, ಶ್ರೀ ಗಂಗಾಧರ ಐತಾಳರೊಡನೆ ಮದುವೆಯಾದ ಬಳಿಕ 1988ರಲ್ಲಿ ಕುಂದಾಪುರದ ಭಂಡಾರ್ಕರ್ಸ್ ಕಾಲೇಜಿಗೆ ಬಂದು ಇಂಗ್ಲಿಷ್ ವಿಭಾಗದ ಮುಖ್ಯಸ್ಥೆಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಪಾರ್ವತಿ ಅವರು ಅನೇಕ ಸಣ್ಣ ಕಥೆ, ಕವನ, ನಾಟಕ ಬರೆದಿರುವರಾದರೂ, ಅನುವಾದ ಕ್ಷೇತ್ರದಲ್ಲಿ ಹೆಚ್ಚಿನ ...
READ MORE