ಈ ಭೂಮಿಯಿಂದ ಆ ಆಕಾಶದವರೆಗೆ ಕೃತಿಯು ಡಿ.ಎಸ್.ನಾಗಭೂಷಣ ಸಾಹಿತ್ಯ ವಿಮರ್ಶೆಯ ಸಂಕಲನವಾಗಿದೆ. ಅವರು ಬರೆದ ಎಲ್ಲ ಸಾಹಿತ್ಯ ವಿಮರ್ಶೆಯ ಲೇಖನಗಳು ಇಲ್ಲಿ ಸಂಕಲಿತವಾಗಿವೆ. ಇವೆಲ್ಲ ಬೇರೆ ಬೇರೆ ಸಂದರ್ಭಗಳಲ್ಲಿ ಬೇರೆ ಬೇರೆ ಸಂಘಟಕರಿಂದ ಆಹ್ವಾನಿತವಾದ ಲೇಖನಗಳು.
ಗಣಿತ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದ ಡಿ.ಎಸ್.ನಾಗಭೂಷಣ ಅವರು 1952 ಫೆಬ್ರವರಿ 1 ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಹೊಸಕೋಟೆ ತಾಲ್ಲೂಕಿನ ತಿಮ್ಮಸಂದ್ರದಲ್ಲಿ ಜನಿಸಿದರು. ದೆಹಲಿ ಆಕಾಶವಾಣಿಯಲ್ಲಿ ಕನ್ನಡ ವಾರ್ತಾ ವಾಚಕರಾಗಿ1975ರಿಂದ 1981ರವರೆ ಸೇವೆ ಸಲ್ಲಿಸಿದ್ದ ಅವರು ಆನಂತರದಲ್ಲಿ ಸಹಾಯಕ ನಿಲಯ ನಿರ್ದೇಶಕರಾಗಿ 7 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. 2005ರಲ್ಲಿ ವೃತ್ತಿಯಿಂದ ಸ್ವಯಂ ನಿವೃತ್ತಿ ಪಡೆದರು. ಓದು, ಬರವಣಿಗೆಯನ್ನು ಹವ್ಯಾಸವಾಗಿಸಿಕೊಂಡಿರುವ ಅವರು ‘ಇಂದಿಗೆ ಬೇಕಾದ ಗಾಂಧಿ’, ‘ಲೋಹಿಯಾ ಜೊತೆಯಲ್ಲಿ’, ‘ರೂಪ ರೂಪಗಳನು ಧಾಟಿ’, ‘ಕುವೆಂಪು ಒಂದು ಪುನರನ್ವೇಷಣೆ’, ‘ಕುವೆಂಪು ಸಾಹಿತ್ಯ ದರ್ಶನ’, ‘ಜಯ ಪ್ರಕಾಶ ನಾರಾಯಣ ...
READ MORE