ಖ್ಯಾತ ಲೇಖಕ ಹಾಗೂ ಕಥೆಗಾರ ಕೇಶರೆಡ್ಡಿ ಹಂದ್ರಾಳ ಅವರ ಕಥೆಗಳ ಕೃತಿ-ಈ ಕ್ಷಣದ ಬುದ್ಧ. ವಸ್ತು, ನಿರೂಪಣಾ ಶೈಲಿ, ಸನ್ನಿವೇಶಗಳ ಜೋಡಣೆ, ಪಾತ್ರಗಳ ಸೃಷ್ಟಿ ಇತ್ಯಾದಿ ಸಾಹಿತ್ಯಕ ಅಂಶಗಳಿಂದ ಈ ಕೃತಿಯ ಕಥೆಗಳು ಓದುಗರ ಗಮನ ಸೆಳೆಯುತ್ತವೆ. ಬದುಕಿನ ಸಣ್ಣ -ಸಣ್ಣ ಘಟನೆಗಳನ್ನು ಆಧರಿಸಿದ ವಸ್ತು, ಬದುಕಿನ ಸಂದೇಶಗಳನ್ನು ಒಳಗೊಂಡಿವೆ.
ಕನ್ನಡದ ಪ್ರಮುಖ ಕಥೆಗಾರರಲ್ಲಿ ಒಬ್ಬರಾದ ಕೇಶವರೆಡ್ಡಿ ಹಂದ್ರಾಳ ಅವರು 22-07-1957 ರಲ್ಲಿ ಮಧುಗಿರಿ ತಾಲೂಕಿನ ಹಂದ್ರಾಳದಲ್ಲಿ ಜನಿಸಿದರು. ತಂದೆ ತಾಯಿ ಇಬ್ಬರೂ ಅನಕ್ಷರಸ್ಥರು . ಕೃಷಿ ಕೆಲಸಗಳನ್ನು ಮಾಡಿಕೊಂಡೇ ಹಂದ್ರಾಳದ ಪ್ರೈಮರಿ ಸ್ಕೂಲು , ಬ್ಯಾಲ್ಯದ ಮಿಡ್ಲಿಸ್ಕೂಲು ಪೂರೈಸಿದ್ದು . ತಾತ ನರಸಿಂಹರೆಡ್ಡಿ ಆಂಧ್ರದ ಅನಂತಪುರ ಜಿಲ್ಲೆಯ ಊರೊಂದರ ಜಮೀನುದಾರ . ಕಳೆದ ಶತಮಾನದ ಇಪ್ಪತ್ತರ ದಶಕದಲ್ಲಿ ಆ ಸೀಮೆಯ ಶೋಷಕ ಬ್ರಿಟಿಷ್ ಕಲೆಕ್ಟರ್ ನನ್ನು ಖೂನಿ ಮಾಡಿ ರಾತ್ರೋರಾತ್ರಿ ಕರ್ನಾಟಕದ ಕಡೆ ಪ್ರಯಾಣ . ಕಾಪು ರೆಡ್ಡಿಯಾಗಿದ್ದ ತಾತ ಮದುವೆಯಾಗಿದ್ದು ಕಮ್ಮ ಜಾತಿಯ ಅಜ್ಜಿಯನ್ನು . 1947 ...
READ MORE