ಖ್ಯಾತ ಕವಿ ಜಯಂತ ಕಾಯ್ಕಿಣಿ ಅವರ ಸಿನಿಮಾ ಪದ್ಯಗಳನ್ನುಸಂಕಲಿಸಿದ ಕೃತಿ-ಎಲ್ಲೋ ಮಳೆಯಾಗಿದೆ. ಕಾವ್ಯ ರಚನೆ ಸೇರಿದಂತೆ ಸಿನಿಮಾ ಸಾಹಿತ್ಯ ರಚನೆಯಲ್ಲೂ ತಮ್ಮದೇ ಛಾಪು ಮೂಡಿಸಿರುವ ಕವಿಗಳು, ಚಲನಚಿತ್ರ ಕಥೆಯ ಭಾವ-ಸನ್ನಿವೇಶಕ್ಕೆ ಅನುಗುಣವಾಗಿ ಭಾವಪೂರಿತವಾಗಿ ಕವಿತೆಗಳನ್ನು ಬರೆಯುವುದು ಇವರ ವೈಶಿಷ್ಟ್ಯ. ಹಾಡುಗಳನ್ನು ಕೇಳುತ್ತಲೇ ಭೌತಿಕ ಜಗತ್ತಿನಿಂದ ದೂರ ಸಾಗುವ ಹಾಗೂ ಭಾವ ಜಗತ್ತನ್ನು ಪ್ರವೇಶಿಸುವ ಅನುಭವ ನೀಡುತ್ತವೆ.
ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದಲ್ಲಿ ಜನಿಸಿದ ಜಯಂತ ಅವರ ತಂದೆ ಗೌರೀಶ ಕಾಯ್ಕಿಣಿ ಹೆಸರಾಂತ ವಿಚಾರವಾದಿ ಲೇಖಕ. ಆಧುನಿಕ ಬದುಕಿನ ಆತಂಕಗಳನ್ನು ಕತೆಯಾಗಿಸುವ ಜಯಂತ ಕಾಯ್ಕಿಣಿ ಅವರು ಕನ್ನಡದ ಪ್ರಮುಖ ಕತೆಗಾರರಲ್ಲಿ ಒಬ್ಬರು. ’ಕತೆಗಾರ’ ಎಂಬ ವಿಶೇಷಣ ಇದೆಯಾದರೂ ಅವರೊಬ್ಬ ಪ್ರಮುಖ ಕವಿ ಕೂಡ ಹೌದು. ಪ್ರಬಂಧ, ಅಂಕಣ ಬರಹ, ಚಲನಚಿತ್ರ ಸಂಭಾಷಣೆ ಮತ್ತು ಗೀತರಚನೆ ಹೀಗೆ ಹಲವು ಪ್ರಕಾರಗಳಲ್ಲಿ ಹೆಜ್ಜೆಗುರುತು ಮೂಡಿಸಿದ್ದಾರೆ. ’ಭಾವನಾ’ ಮಾಸಿಕ ಪತ್ರಿಕೆಯ ಸಂಪಾದಕರಾಗಿದ್ದ ಜಯಂತ ಅವರು ಈಟಿವಿ ವಾಹಿನಿಗಾಗಿ ’ನಮಸ್ಕಾರ’, ಬೇಂದ್ರೆ, ಕುವೆಂಪು, ಕಾರಂತ ನಮನ ಸರಣಿಯ ಕಾರ್ಯಕ್ರಮಗಳನ್ನು ನಡೆಸಿಕೊಟ್ಟಿದ್ದಾರೆ. ರಂಗದಿಂದೊಂದಿಷ್ಟು ದೂರ, ಕೋಟಿತೀರ್ಥ, ಶ್ರಾವಣ ಮಧ್ಯಾಹ್ನ, ...
READ MORE