ಜಾನ್ ಕ್ರಾಕೌರ್ ಅಮೇರಿಕಾದ ಜನಪ್ರಿಯ ಲೇಖಕ ಮತ್ತು ಪರ್ವತರೋಹಿ. ಈತನ ಕೃತಿಯನ್ನು ಕನ್ನಡಕ್ಕೆ ತಂದವರು ವಸುಧೇಂದ್ರ.
’ಎವರೆಸ್ಟ್’ ಕೃತಿಯು ಪರ್ವತಾರೋಹಣದ ದುರಂತ ಕತೆಯಾಗಿದೆ. ಪರ್ವತಾರೋಹಣ ಮಾಡುವಾಗ ನಡೆದ ಘಟನೆಗಳು ಲೇಖಕರ ಬದುಕಿನ ಧೈರ್ಯವನ್ನು ನಿರಂತರವಾಗಿ ಕೆಣಕಿದ ಕಥಾನಕ ಅಂಶಗಳು ಈ ಕೃತಿಯಲ್ಲಿದೆ.
ಲೇಖಕರಿಗೆ ಎವರೆಸ್ಟ್ ಹತ್ತುವ ಬಯಕೆಯು ಸಂಕೀರ್ಣವಾದ ಸಂಗತಿ, ಮತ್ತು ಅಪಾಯಕಾರಿ ವಿಸ್ಮಯ, ವಿಷಯಗಳು ತಿಳಿದಿದ್ದರೂ ಎವರೆಸ್ಟ್ ಹತ್ತಲೇಬೇಕೆನಿಸಿದ ಲೇಖಕರ ತೊಳಲಾಟದ ಪರಿಯನ್ನೂ, ಕಹಿ ಸತ್ಯದ ಮುಖಗಳನ್ನು ಒಂದೆಡೆ ಕೃತಿ ತೆರೆದಿಡುತ್ತದೆ.
ವಸುಧೇಂದ್ರ ಅವರು ಕನ್ನಡದ ಪ್ರಸಿದ್ಧ ಬರಹಗಾರರು ಹಾಗೂ ಪುಸ್ತಕ ಪ್ರಕಾಶಕರು. ಮುಖ್ಯವಾಗಿ ಕತೆ, ಕಾದಂಬರಿ, ಲಲಿತ ಪ್ರಬಂಧಗಳು ಇವರ ಬರವಣಿಗೆಯ ಪ್ರಕಾರಗಳು. ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ 1969ರಲ್ಲಿ ಜನಿಸಿದ ವಸುಧೇಂದ್ರ ಅಲ್ಲಿಯೇ ಪ್ರಾಥಮಿಕ ಶಿಕ್ಷಣವನ್ನು ಪೂರ್ಣಗೊಳಿಸಿದ್ದಾರೆ. ಆನಂತರ ಸುರತ್ಕಲ್ ನಿಂದ ಇಂಜಿನಿಯರಿಂಗ್ ಪದವಿ ಮತ್ತು ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಯ್ ನಿಂದ ಎಂ.ಇ. ಪದವಿ ಪಡೆದಿದ್ದಾರೆ. ಸುಮಾರು 20 ವರ್ಷಗಳ ಕಾಲ ಸಾಫ್ಟ್ ವೇರ್ ಕ್ಷೇತ್ರದಲ್ಲಿ ಕೆಲಸ ಮಾಡಿರುವ ಅವರು ಸದ್ಯ ಬೆಂಗಳೂರಿನಲ್ಲಿ ವಾಸವಿದ್ದು, ಸದ್ಯಕ್ಕೆ ಸಾಹಿತ್ಯಿಕ ಕೆಲಸಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಮನೀಷೆ, ಯುಗಾದಿ, ಚೇಳು, ಹಂಪಿ ಎಕ್ಸ್ ...
READ MORE