ಫೀಲ್ಡ್ ಮಾರ್ಷಲ್ ಕಾರ್ಯಪ್ಪ

Author : ನಾ. ಡಿಸೋಜ

Pages 90

₹ 15.00




Year of Publication: 2012
Published by: ರಾಷ್ಟ್ರೋತ್ಥಾನ ಸಾಹಿತ್ಯ
Address: ಕೇಶವ ಶಿಲ್ಪ, ಕೆಂಪೇಗೌಡ ನಗರ, ಬೆಂಗಳೂರು-560019
Phone: 9945036300

Synopsys

`ಫೀಲ್ಡ್ ಮಾರ್ಷಲ್ ಕಾರ್ಯಪ್ಪ' ಜೀವನಚರಿತ್ರೆ ಕೃತಿಯನ್ನು ಲೇಖಕ ನಾ. ಡಿಸೋಜ ಅವರು ರಚಿಸಿದ್ದಾರೆ. ಈ ಕೃತಿಯಲ್ಲಿ ಭಾರತದ ಸೇನೆಯ ಪ್ರಥಮ ದಂಡನಾಯಕರಾದ ಇತಿಹಾಸ, ಸೈನ್ಯಕ್ಕೆ ಸೇರುವತ್ತ ಒಲವು ಪಡೆದ ಪರಿ, ಮರುಭೂಮಿಯಂಥ ವಿಪರೀತ ಹವಾಮಾನವಿರುವ ಆ ಪ್ರದೇಶದಲ್ಲಿ ಲೆಫ್ಟಿನೆಂಟ್ ಆಗಿ ಕಾರ್ಯನಿರ್ವಹಿಸಿದ ಕಥನಗಳು, ಹಲವಾರು ಸಾಹಸಮಯ ಘಟ್ಟಗಳು, ವಿಜಯಶ್ರೀ ಬ್ರಿಟಿಷ್ ಸೈನ್ಯದ ಮೇಲಧಿಕಾರಿಗಳ ಮೆಚ್ಚುಗೆ, ಹಲವಾರು ಏಳು ಬೀಳುಗಳು, ಬಾಲ್ಯದ ದಿನಗಳು...ಹೀಗೆ ಹಲವಾರು ಅಯಾಮಗಳನ್ನು ಲೇಖಕರು ಈ ಪುಸ್ತಕದಲ್ಲಿ ಸುಂದರವಾಗಿ ಕಟ್ಟಿಕೊಟ್ಟಿದ್ದಾರೆ.

About the Author

ನಾ. ಡಿಸೋಜ
(06 June 1937 - 05 January 2025)

ನಾ ಡಿಸೋಜ ಬರಹಗಾರರು, ಲೋಕೋಪಯೋಗಿ ಇಲಾಖೆಯಲ್ಲಿ ನೌಕರರಾಗಿ ನಿವೃತ್ತಿ ಹೊಂದಿದವರು. ಸುಮಾರು ಐದು ದಶಕಗಳಿಂದಲೂ ಕನ್ನಡ ಸಾಹಿತ್ಯದ ಎಲ್ಲ ಪ್ರಕಾರಗಳಲ್ಲಿಯೂ ಕೃತಿ ರಚಿಸುತ್ತ ಬಂದಿರುವ ನಾರ್ಬರ್ಟ್ ಡಿಸೋಜ ಅವರು ಹುಟ್ಟಿದ್ದು ಜೂನ್ 6, 1937 ರಲ್ಲಿ.  ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಜನಿಸಿದರು. ತಂದೆ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರಾಗಿದ್ದ ಎಫ್.ಪಿ. ಡಿಸೋಜ, ತಾಯಿ ರೂಪೀನಾ ಡಿಸೋಜ. ಅವರು 2025 ಜ. 05 ಭಾನುವಾರದಂದು ನಿಧನರಾದರು.  ಪರಿಸರ ಕಾಳಜಿಯುಳ್ಳ ಮಹತ್ವದ ಕಥೆಗಾರರೆನಿಸಿದ್ದು ಕನ್ನಡ ಸಾಹಿತ್ಯ ಲೋಕದಲ್ಲಿ ಮಕ್ಕಳ ಸಾಹಿತ್ಯವನ್ನು ಒಳಗೊಂಡಂತೆ ಅಪಾರವಾದ ಕೃಷಿ ನಡೆಸಿದ್ದಾರೆ. ಪ್ರಾರಂಭದ ದಿನಗಳಲ್ಲಿ 'ಪ್ರಪಂಚ' ಪತ್ರಿಕೆಗೆ ...

READ MORE

Related Books