ಡಾ. ಶ್ರೀನಿವಾಸ ಕಕ್ಕಿಲ್ಲಾಯ ಬಿ. ಅವರು ‘ಫ್ಲ್ಯೂ ಎಂದು ಹೆದರುವಿರೇಕೆ?’ ಎಂಬ ಕೃತಿಯನ್ನು ಬರೆಯುವ ಮೂಲಕ ಜನಜಾಗೃತಿ ಮೂಡಿಸು ಪ್ರಯತ್ನ ಮಾಡಿದ್ದಾರೆ. ಸಾಂಕ್ರಾಮಿಕ ರೋಗಗಳ ಬಗ್ಗೆ ಜನರಲ್ಲಿ ನಿರ್ಲಕ್ಷ್ಯವೂ ಇದೆ; ಅತ್ಯಂತ ಸಂವೇದನಾಶೀಲ ಭೀತಿಯೂ ಇದೆ. ಎರಡೂ ತೀವ್ರ ದುಷ್ಪರಿಣಾಮಕಾರಿ. ಈ ಬಗ್ಗೆ ಮುಂಜಾಗ್ರತಾ ಕ್ರಮಗಳ ಬಗ್ಗೆ ಅರಿವು ಮೂಡಿಸಲು ಹಾಗೂ ಪ್ರತಿಯೊಬ್ಬ ಪ್ರಜೆಯೂ ಹೊಣೆಗಾರಿಕೆಯಿಂದ ವರ್ತಿಸುವ ಅಗತ್ಯತೆ ಬಗ್ಗೆ ಲೇಖಕರು ಈ ಕೃತಿಯ ಮೂಲಕ ಕಾಳಜಿ ತೋರಿದ್ದಾರೆ. ಈ ಕೃತಿಗೆ ಶಿವಮೊಗ್ಗದ ಕರ್ನಾಟಕ ಸಂಘದ ಡಾ. ಎಚ್. ಡಿ. ಚಂದ್ರಪ್ಪಗೌಡ ವೈದ್ಯ ಸಾಹಿತ್ಯ ಪ್ರಶಸ್ತಿ’ (2010) ದೊರೆತಿದೆ.
ಮಂಗಳೂರಿನ ಸ್ಪಂದನಾ ಸೆಂಟರ್ ಫಾರ್ ಮೆಟಾಬಾಲಿಕ್ ಮೆಡಿಸಸಿನ್ ಕೇಂದ್ರದಲ್ಲಿ ವೈದ್ಯರಾಗಿರುವ ಡಾ. ಶ್ರೀನಿವಾಸ ಕಕ್ಕಿಲ್ಲಾಯ ಅವರು ಪ್ರೌಢಶಿಕ್ಷಣವನ್ನು ಮಂಗಳೂರಿನ ಕೆನರಾ ಪ್ರೌಢಶಾಲೆಯಲ್ಲಿ ಪಡೆದರು. ಮಂಗಳೂರಿನ ಕಸ್ತೂರಬಾ ಮೆಡಿಕಲ್ ಕಾಲೇಜಿನಲ್ಲಿ ಅಧ್ಯಯನ ನಡೆಸಿ ಎಂ.ಬಿ.ಬಿ.ಎಸ್. ಪದವಿ ಪಡೆದ ಶ್ರೀನಿವಾಸ ಅವರು ಹುಬ್ಬಳ್ಳಿಯ ಕರ್ನಾಟಕ ಮೆಡಿಕಲ್ ಕಾಲೇಜಿನಿಂದ 1992ರಲ್ಲಿ ಸ್ನಾತಕೋತ್ತರ (ಎಂ.ಡಿ.) ಪದವಿ ಪಡೆದರು. ಕರ್ನಾಟಕ ಏಕೀಕರಣಕ್ಕೆ ಶ್ರಮಿಸಿದವರಲ್ಲಿ ಒಬ್ಬರಾದ ಬಿ.ವಿ.ಕಕ್ಕಿಲ್ಲಾಯ ಅವರ ಪುತ್ರರಾಗಿರುವ ಶ್ರೀನಿವಾಸ ಅವರು ಕರ್ನಾಟಕ ವಿಧಾನಸಭೆಯಲ್ಲಿ ಬಿ.ವಿ. ಕಕ್ಕಿಲ್ಲಾಯ ಕೃತಿಯನ್ನು ಸಂಪಾದಿಸಿದ್ದಾರೆ. ...
READ MORE