ಖ್ಯಾತ ಲೇಖಕ ಸುರೇಶ ದ್ವಾದಶೀವಾರ ಅವರು ಮರಾಠಿಯಲ್ಲಿ ಬರೆದ ಕೃತಿಯನ್ನು ಲೇಖಕ ಚಂದ್ರಕಾಂತ ಪೋಕಳೆ ಅವರು ಕನ್ನಡಕ್ಕೆ ಅನುವಾದಿಸಿದ ಕೃತಿ-ಗಾಂಧೀಜಿ ಮತ್ತು ಅವರ ಟೀಕಾಕಾರರು. ಗಾಂಧೀಜಿ ಮತ್ತು ಅವರ ನಿಗೂಢತೆ, ಗಾಂಧೀಜಿ, ಗೋಖಲೆ, ತಿಲಕರು, ಗಾಂಧೀಜಿ ಮತ್ತು ಸಶಸ್ತ್ರಕಾರರು, ಗಾಂಧೀಜಿ ಮತ್ತು ವಿನ್ ಸ್ಟನ್ ಚರ್ಚಿಲ್, ಗಾಂಧೀಜಿ ಮತ್ತು ಕಸ್ತೂರ ಬಾ, ಗಾಂಧೀಝಿ ಮತ್ತು ಧರ್ಮ ಹೀಗೆ ಮಹತ್ವದ ಹಾಗೂ ಚಿಂತನಾಪೂರ್ಣವಾದ ಒಟ್ಟು 18 ಲೇಖನಗಳನ್ನು ಈ ಕೃತಿ ಒಳಗೊಂಡಿದೆ. ಇದರೊಂದಿಗೆ, ಗಾಂಧೀಜಿ ಅವರ ವ್ಯಕ್ತಿತ್ವ ಹಾಗೂ ಚಿಂತನೆಗಳನ್ನುಟೀಕಿಸುತ್ತಿದ್ದ ಹತ್ತು ಹಲವಾರು ಗಣ್ಯರ ಅಭಿಪ್ರಾಯಗಳನ್ನು, ಕಾರಣಗಳನ್ನು ಇಲ್ಲಿ ಸಂಗ್ರಹಿಸಿ ನೀಡಿದ್ದು ಈ ಕೃತಿಯ ಹೆಚ್ಚುಗಾರಿಕೆ.
ಲೇಖಕರು, ಪ್ರಖ್ಯಾತ ಅನುವಾದಕರೂ ಆದ ಚಂದ್ರಕಾಂತ ಪೊಕಳೆ ಅವರು 20-08-1949 ರಂದು ಜನಿಸಿದರು. ಹುಟ್ಟೂರು ಉತ್ತರ ಕನ್ನಡ ಜಿಲ್ಲೆಯ ಮಂಚಿಕೇರಿ. ತಂದೆ- ಮಹಾಬಲೇಶ್ವರ, ತಾಯಿ- ಪಾರ್ವತಿ. ಹೈಸ್ಕೂಲುವರೆಗೆ ಮಂಚಿಕೇರಿಯಲ್ಲಿ ಓದಿದ ಅವರು, ಧಾರವಾಡದ ಕಾಲೇಜಿನಿಂದ ಬಿ.ಎ ಪದವಿ ಮತ್ತು ಕರ್ನಾಟಕ ವಿಶ್ವವಿದ್ಯಾಲಯದಿಂದ ಎಂ.ಎ. ಪದವಿಗಳಿಸಿದ್ದಾರೆ. ಧಾರವಾಡದಲ್ಲಿ ವಿದ್ಯಾರ್ಥಿಯಾಗಿದ್ದಾಗಲೇ ಗೌರೀಶ ಕಾಯ್ಕಿಣಿ, ಶಂಬಾ, ಬೇಂದ್ರೆ, ಇವರುಗಳ ಸಾಹಿತ್ಯದಿಂದ ಪ್ರೇರಿತರಾದ ಪೊಕಳೆ, ಅಧ್ಯಾಪಕ ವೃತ್ತಿಯನ್ನು ಆಯ್ಕೆ ಮಾಡಿಕೊಂಡವರು. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಬೇಡಕಿಹಾಳದ ಲಠ್ಠೆ ಶಿಕ್ಷಣ ಸಂಸ್ಥೆಯಲ್ಲಿ ಅಧ್ಯಾಪಕ ವೃತ್ತಿ ಆರಂಭಿಸಿದ ಅವರು ಪ್ರಾಂಶುಪಾಲರಾಗಿ ಕಾರ್ಯ ನಿರ್ವಹಿಸಿ ನಿವೃತ್ತಿ ...
READ MORE