ನಾಗರಾಜರಾವ್ ಎಂ.ವಿ ಅವರ ಕೃತಿ ಗಾಂಧೀಜಿ 100 ಆದರ್ಶಗಳು. ಮಹಾತ್ವ ಗಾಂಧೀಜಿಯವರು ಸತ್ಯ, ಅಹಿಂಸೆ, ಶ್ರದ್ಧೆ, ನಿಷ್ಠೆ ಮೊದಲಾದ ಶ್ರೇಷ್ಠ ಜೀವನಮೌಲ್ಯಗಳಿಗೆ ಮತ್ತೊಂದು ಹೆಸರೇ ಆಗಿದ್ದರು. ಅವರು ಕನಸಿದ್ದು ಸುಂದರ ರಾಮರಾಜ್ಯವನ್ನು, ಅಹಂಮ್ಮಿಕೆಯಿಂದ ಸಂಪೂರ್ಣ ಮುಕ್ತರಾಗಿ ಧೀನದಲಿತರ ಪರ, ದುರ್ಬಲರ ಸೇವೆಯಲ್ಲಿ ತೊಡಗಿಸಿಕೊಳ್ಳುವುದೇ ಶ್ರೇಷ್ಠ ಆದರ್ಶವೆಂದ ಗಾಂಧೀಜಿಯವರ ನೂರು ಆದರ್ಶನಗಳನ್ನು ಲೇಖಕ ನಾಗರಾಜರಾವ್ ಅವರು ಈ ಕೃತಿಯಲ್ಲಿ ವಿವರಿಸಿದ್ದಾರೆ.
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಎಂ.ವಿ. ನಾಗರಾಜ ರಾವ್, ಸರ್ಕಾರಿ ಜೂನಿಯರ್ ಕಾಲೇಜಿನ ಉಪಾನ್ಯಾಸಕರು ನಂತರ ಪ್ರಾಂಶುಪಾಲರಾಗಿ ನಿವೃತ್ತಿ ಹೊಂದಿದ್ದಾರೆ. ಕನ್ನಡ ಹಾಗೂ ಹಿಂದಿಯಲ್ಲಿ ಎಂ.ಎ. ಹಾಗೂ ಬಿ.ಇಡಿ. ಸಾಹಿತ್ಯ ರತ್ನ ಪೂರೈಸಿದ್ದಾರೆ. ಜೇಮ್ಸ್ ಹ್ಯಾಡ್ಲಿ ಚೇಸ್ ಅವರ 20 ಕಾದಂಬರಿಗಳನ್ನು ಕನ್ನಡಕ್ಕೆ ಅನುವಾದಿಸಿದ ಹೆಗ್ಗಳಿಕೆ ಇವರದ್ದು. ಹಾಸ್ಯ-ವಿಡಂಬನೆ-ವೈಚಾರಿಕತೆ ಸೇರಿದಂತೆ ಸುಮಾರು 300ಕ್ಕೂ ಅಧಿಕ ಲೇಕನಗಳನ್ನು ಬರೆದಿದ್ದಾರೆ. ಇವರ ‘ಕಂಪನ’ ಕಾದಂಬರಿಯು ಚಲನಚಿತ್ರವಾಗಿದೆ. ಮಕ್ಕಳ ಸಾಹಿತ್ಯಕ್ಕೆ ಸಂಬಂಧಿಸಿದ ಕೃತಿಗಳನ್ನು ರಚಿಸಿದ್ದಾರೆ. 1985ರಲ್ಲಿ ಶೃಂಗಾರ ಪ್ರಕಾಶನ ಸಂಸ್ಥೆ ಸ್ಥಾಪಿಸಿ, ಸುಮಾರು 242 ಪುಸ್ತಕಗಳನ್ನು ಪ್ರಕಟಿಸಿದ್ದು, ಕರ್ನಾಟಕ ಸರ್ಕಾರದಿಂದ ‘ಪುಸ್ತಕ ಸೊಗಸು’ ಪ್ರಶಸ್ತಿ ಪಡೆದಿದ್ದಾರೆ. ಅನುವಾದಿತ ಕೃತಿಗಳು : ಜೇಮ್ಸ್ ಹ್ಯಾಡ್ಲಿ ...
READ MORE