ಗಾಂಧಿಯನ್ನು ನಿಜವಾಗಿ ಕೊಂದವರು ಯಾರು?

Author : ಕೆ.ಎಸ್‍. ನಾರಾಯಣಾಚಾರ್ಯ

Pages 152

₹ 150.00




Year of Publication: 2014
Published by: ಸಾಹಿತ್ಯ ಪ್ರಕಾಶನ,
Address: ಕೊಪ್ಪೀಕರ್ ಬೀದಿ, ಹುಬ್ಬಳ್ಳಿ- 580020
Phone: 08362367676

Synopsys

ಹಿರಿಯ ಲೇಖಕ ಪ್ರೊ. ಕೆ.ಎಸ್. ನಾರಾಯಣಾಚಾರ್ಯ ಅವರ ಕೃತಿ-ಗಾಂಧೀಜಿಯನ್ನು ನಿಜವಾಗಿ ಕೊಂದವರು ಯಾರು?. ಗಾಂಧಿ ನಿಜ ರಾಷ್ಟ್ರ ಭಕ್ತರೇ? ಸ್ವತಂತ್ರ ಚಿಂತಕರೇ? ತ್ಯಾಗಶೀಲರೇ? ಶೀಲವುಳ್ಳ, ವಿಶ್ವಸನೀಯ ನಾಯಕರೇ? ಎಂಬ ಪ್ರಶ್ದನೆಗಳ ಮೂಲಕವೇ ಇಲ್ಲಿಯ ಬರಹ ತನ್ನ ಗತಿ ಪಡೆದಿದೆ. ಮಹಾತ್ಮ ಗಾಂಧೀಜಿ ಹಾಗೂ ಜವಾಹರ ಲಾಲ್ ನೆಹರು ಅವರ ಧಾರ್ಮಿಕ ನಿಲುವು, ರಾಜಕೀಯ, ನಡಾವಳಿಕೆಗಳು, ಭಾರತೀಯ ಸಂಸ್ಕೃತಿಗಳ ಪರಿಕಲ್ಪನೆ ಇತ್ಯಾದಿ ವಿಷಯಗಳಡಿ ವಿಶ್ಲೇಷಿಸಿದ ಬರಹಗಳು ಒಳಗೊಂಡಿವೆ. 

About the Author

ಕೆ.ಎಸ್‍. ನಾರಾಯಣಾಚಾರ್ಯ
(31 October 1933 - 26 November 2021)

ಹಿರಿಯ ವಿದ್ವಾಂಸ ಹಾಗೂ ಪ್ರವಚನಕಾರರೂ ಆಗಿರುವ ಪ್ರೊ. ಕೆ.ಎಸ್. ನಾರಾಯಣಾಚಾರ್ಯರು ಮೂಲತಃ ಬೆಂಗಳೂರು ಜಿಲ್ಲೆಯ  (ಈಗಿನ ಕನಕಪುರ) ಕನಕನಹಳ್ಳಿಯವರು. ತಂದೆ ಕೆ.ಎನ್. ಶ್ರೀನಿವಾಸ ದೇಶಿಕಾಚಾರ್. ತಾಯಿ ರಂಗನಾಯಕಮ್ಮ. ವೈದಿಕ ವಿದ್ವಾಂಸರ ಕುಟುಂಬ ಇವರದು.ಮೈಸೂರಿನ ಮಹಾರಾಜ ಕಾಲೇಜಿನಿಂದ ಬಿ.ಎಸ್.ಸಿ. ಪದವೀಧರರು. ನಂತರ ಬಿ.ಎ. ಆನರ್ಸ್‌ ಮಾಡಿ, ಆಧುನಿಕ ಇಂಗ್ಲಿಷ್ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದರು. ಡಬ್ಲ್ಯು.ಬಿ. ಯೇಟ್ಸ್ ಮತ್ತು ಟಿ.ಎಸ್. ಎಲಿಯೆಟ್‌ ಅವರ ಕಾವ್ಯದ ಮೇಲೆ ಭಾರತೀಯ ಸಂಸ್ಕೃತಿಯ ಕುರಿತು ಅಧ್ಯಯನ ನಡೆಸಿ ಪಿಎಚ್.ಡಿ. ಪಡೆದರು. ಧಾರವಾಡದ ಕರ್ನಾಟಕ ಕಾಲೇಜಿನಲ್ಲಿ ಇಂಗ್ಲಿಷ್ ಅಧ್ಯಾಪಕರಾಗಿ, ಆ ಕಾಲೇಜಿನ ಪ್ರಾಂಶುಪಾಲರಾಗಿ ನಿವೃತ್ತರಾದರು. ಸದ್ಯ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ವೇದಗಳು, ರಾಮಾಯಣ, ...

READ MORE

Related Books