ಪ್ರೊ. ಕೆ.ಎಸ್. ನಾರಾಯಣಾಚಾರ್ಯ ಅವರು ಬರೆದ ಕೃತಿ-ಗಾಂಧಿಯನ್ನು ಕೊಂದಿದ್ದು ಯಾರು?. ಮಹಾತ್ಮ ಗಾಂಧೀಜಿ ಅವರನ್ನು ದೇಶಾಭಿಮಾನದ ಹಿನ್ನೆಲೆಯಲ್ಲಿ ಹತ್ಯೆ ಮಾಡಲಾಯಿತು ಎಂಬ ವಾದಗಳು ಇವೆ. ಹಂತಕರನ್ನು ಪ್ರಶಂಸಿಸುವ ಒಂದು ವರ್ಗವೇ ಇಂದಿಗೂ ಜೀವಂತವಾಗಿ ಆಗಾಗ ತನ್ನ ವರಸೆಗಳನ್ನು ಪ್ರದರ್ಶಿಸುತ್ತಲೇ ಇರುತ್ತದೆ. ದೇಶಕ್ಕೆ ಸ್ವಾತಂತ್ಯ್ರವನ್ನು ತಂದು ಕೊಟ್ಟ ಗಾಂಧೀಜಿ ಅವರೇ ದೇಶ ಒಡೆಯುವ ಕೆಲಸಕ್ಕೆ ಕೈ ಹಾಕಿ, ಪಾಕಿಸ್ತಾನ ಉಗಮಕ್ಕೆ ಕಾರಣರಾದರು ಎಂಬುದು ಇವರ ವಾದ. ಈ ಎಲ್ಲ ವಾದ-ವಿವಾದದ ಮಧ್ಯೆಯೂ ಮಹಾತ್ಮ ಗಾಂಧೀಜಿಯ ವ್ಯಕ್ತಿತ್ವ ಅಮರವಾಗೇ ಉಳಿದಿದೆ. ಈ ಜಿಜ್ಞಾಸೆಯ ಭಾಗವಾಗಿ ಕೃತಿಯಲ್ಲಿ ಈ ಚಿಂತನೆ ಹರಿದಿದೆ.
ಹಿರಿಯ ವಿದ್ವಾಂಸ ಹಾಗೂ ಪ್ರವಚನಕಾರರೂ ಆಗಿರುವ ಪ್ರೊ. ಕೆ.ಎಸ್. ನಾರಾಯಣಾಚಾರ್ಯರು ಮೂಲತಃ ಬೆಂಗಳೂರು ಜಿಲ್ಲೆಯ (ಈಗಿನ ಕನಕಪುರ) ಕನಕನಹಳ್ಳಿಯವರು. ತಂದೆ ಕೆ.ಎನ್. ಶ್ರೀನಿವಾಸ ದೇಶಿಕಾಚಾರ್. ತಾಯಿ ರಂಗನಾಯಕಮ್ಮ. ವೈದಿಕ ವಿದ್ವಾಂಸರ ಕುಟುಂಬ ಇವರದು.ಮೈಸೂರಿನ ಮಹಾರಾಜ ಕಾಲೇಜಿನಿಂದ ಬಿ.ಎಸ್.ಸಿ. ಪದವೀಧರರು. ನಂತರ ಬಿ.ಎ. ಆನರ್ಸ್ ಮಾಡಿ, ಆಧುನಿಕ ಇಂಗ್ಲಿಷ್ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದರು. ಡಬ್ಲ್ಯು.ಬಿ. ಯೇಟ್ಸ್ ಮತ್ತು ಟಿ.ಎಸ್. ಎಲಿಯೆಟ್ ಅವರ ಕಾವ್ಯದ ಮೇಲೆ ಭಾರತೀಯ ಸಂಸ್ಕೃತಿಯ ಕುರಿತು ಅಧ್ಯಯನ ನಡೆಸಿ ಪಿಎಚ್.ಡಿ. ಪಡೆದರು. ಧಾರವಾಡದ ಕರ್ನಾಟಕ ಕಾಲೇಜಿನಲ್ಲಿ ಇಂಗ್ಲಿಷ್ ಅಧ್ಯಾಪಕರಾಗಿ, ಆ ಕಾಲೇಜಿನ ಪ್ರಾಂಶುಪಾಲರಾಗಿ ನಿವೃತ್ತರಾದರು. ಸದ್ಯ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ವೇದಗಳು, ರಾಮಾಯಣ, ...
READ MORE