ಜನಸಂಖ್ಯೆಯ ಒತ್ತಡಗಳಿಗೆ ಸಿಲುಕಿ ನಜ್ಜುಗುಜ್ಜಾಗುತ್ತಿರುವ ಆರ್ಥಿಕತೆಯನ್ನು ಸರಿದಾರಿಗೆ ತರಲು ಅನುಷ್ಠಾನಶೀಲರಾಗಿದ್ದ ಗಾಂಧಿಯವರು ಪ್ರತಿಪಾದಿಸುತ್ತಿದ್ದ ಆರ್ಥಿಕತೆಯು ಅಂದಿಗಿಂತ ಇಂದು ಹೆಚ್ಚು ಸೂಕ್ತ ಮತ್ತು ಅನಿವಾರ್ಯ ಕೂಡ. ಖಾದಿ ಮತ್ತು ಗ್ರಾಮೀಣ ಕೈಗಾರಿಕೆಗಳು ನಮ್ಮ ವ್ಯವಸಾಯದ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡುತ್ತವೆ ಮತ್ತು ನಗರೀಕರಣವನ್ನು ಕನಿಷ್ಠಮಟ್ಟದಲ್ಲಿ ಇರಿಸುತ್ತದೆ. ಆರ್ಥಿಕತೆಯು ಕೇವಲ ಆರ್ಥಿಕತೆಯಾಗಿ ಉಳಿಯದೆ ಪರಸ್ಪರ ಸಹಕಾರ, ಸ್ವಪರಿಪೂರ್ಣತೆ, ಸಮಷ್ಟಿಯ ಒಳಿತು, ನೈತಿಕತೆಯನ್ನು ಗುರಿಯಾಗಿ ಇಟ್ಟುಕೊಳ್ಳಬೇಕು ಎಂಬ ಅವರ ದೃಷ್ಟಿ, ಬೃಹತ್ ಕೈಗಾರಿಕೆಗಳು ನಮ್ಮ ದೇಶದ ಆರ್ಥಿಕತೆಗೆ ಹೊಂದುವುದಿಲ್ಲ ಎಂಬ ಅವರ ಮನೋಭಾವವನ್ನು ಲೇಖಕರು ಈ ಕೃತಿಯಲ್ಲಿ ವಿವರಿಸಿದ್ದಾರೆ.
ದೇಜಗೌ ಎಂದು ಚಿರಪರಿಚಿತರಾಗಿದ್ದ ದೇವೇಗೌಡ ಜವರೇಗೌಡ ಕೃಷಿಕ ಕುಟುಂಬದಿಂದ ಬಂದವರು. ಚನ್ನಪಟ್ಟಣ ತಾಲ್ಲೂಕಿನ ಮೂಡಿಗೆರೆಯಲ್ಲಿ 1918ರ ಜುಲೈ 6ರಂದು ಜನಿಸಿದರು. ತಂದೆ ದೇವೇಗೌಡ- ತಾಯಿ ಚೆನ್ನಮ್ಮ. ಚಕ್ಕೆರೆ, ಚನ್ನಪಟ್ಟಣಗಳಲ್ಲಿ ಶಾಲಾ ಶಿಕ್ಷಣ ಮುಗಿಸಿ ಬೆಂಗಳೂರಿನಲ್ಲಿ ಕಾಲೇಜು ವಿದ್ಯಾಭ್ಯಾಸ ಮಾಡಿ ಬಿ.ಎ ಪದವಿ ಗಳಿಸಿ ಕೆಲವು ಕಾಲ ಗುಮಾಸ್ತರಾಗಿ ಕೆಲಸ ಮಾಡಿ ಅನಂತರ ಮೈಸೂರಿಗೆ ಹೋಗಿ ಎಂ.ಎ. ಪದವಿ ಗಳಿಸಿದರು. ಮೈಸೂರು ವಿಶ್ವವಿದ್ಯಾಲಯದಲ್ಲಿ ಅಧ್ಯಾಪಕ (1944) ಕೆಲಸಕ್ಕೆ ಸೇರಿದ ಅವರು ಅನಂತರ ಉಪಪ್ರಾಧ್ಯಾಪಕ, ಪರೀಕ್ಷಾಧಿಕಾರಿ, ಪ್ರಾಂಶುಪಾಲರು, ಇಲಾಖಾಮುಖ್ಯರು, ನಿರ್ದೇಶಕರು, ಕೊನೆಗೆ ಮೈಸೂರು ವಿಶ್ವವಿದ್ಯಾಲಯದ ಗೌರವಾನ್ವಿತ ಉಪಕುಲಪತಿಯಾಗಿ ನಿವೃತ್ತರಾದರು. ಕುವೆಂಪು ವಿದ್ಯಾವರ್ಧಕ ...
READ MORE