ಹಿಂದುಸ್ತಾನಿ ಸಂಗೀತ ಸಾಮ್ರಾಜ್ಞೆ ಎಂತಲೇ ಚಿರಪರಿಚಿತರಾಗಿದ್ದ ಗಂಗೂಬಾಯಿ ಹಾನಗಲ್ ಧಾರವಾಡದವರು. ಭಾರತ ದೇಶದ ಸಂಗೀತಗಾರರ ಪರಂಪರೆಯಲ್ಲಿ ರಾಷ್ಟ್ರಮಟ್ಟದಲ್ಲಿ ಗುರುತಿಸಿ ಕೊಂಡ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ದಿಗ್ಗಜರಲ್ಲಿ ಕರ್ನಾಟಕದ ಗಂಗೂಬಾಯಿ ಹಾನಗಲ್ ಪ್ರಮುಖರು. 'ಅನನ್ಯ ಮಹಿಳಾ ಚೇತನ ಮಾಲಿಕೆ'ಯಡಿ ಗಂಗೂಬಾಯಿ ಹಾನಗಲ್ ಅವರ ಬದುಕು ಸಾಧನೆ ಕುರಿತು ಆಳವಾದ ಅಧ್ಯಯನ ನಡೆಸಿ . ಲೇಖಕಿ ಗೀತಾ ಶೆಣೈ ಬರೆದಿದ್ದಾರೆ.
ಗೀತಾ ಶೆಣೈ ಕನ್ನಡದ ಪ್ರಮುಖ ಲೇಖಕಿ. ಇವರು 1954 ಜೂಬ್ 13 ರಂದು ದಕ್ಷಿಣ ಜಿಲ್ಲೆಯಲ್ಲಿ ಜನಿಸಿದರು. ಹಂಪಿಯಿಂದ ಕನ್ನಡ ಭಾಷೆ ಮತ್ತು ಸಾಹಿತ್ಯದಲ್ಲಿ ಪಿಹೆಚ್.ಡಿ, ಪದವಿ ಪಡೆದಿದ್ದಾರೆ. ಇಂದಿರಾಗಾಂಧಿ ಮಹಿಳಾ ಅಧ್ಯಯನದಲ್ಲಿ ಸಿಡಬ್ಲ್ಯೂಇಡಿ ಕೋರ್ಸ್ ಮುಗಿಸಿದ್ದಾರೆ, ಜೀವನ ಚರಿತ್ರೆ, ಅನುವಾದ ಮತ್ತು ಮಹಿಳಾ ಅಧ್ಯಯನ ಇತ್ಯಾದಿ ಪ್ರಕಾರಗಳಲ್ಲಿ 20ಕ್ಕೂ ಹೆಚ್ಚು ಗ್ರಂಥಗಳನ್ನು ಪ್ರಕಟಿಸಿದ್ದಾರೆ. ಇವರ ಮೊದಲ ಕೃತಿ ಝುಂಪಾ ಲಾಹಿರಿಯವರ ಇಂಟರ್‍ಪ್ರಿಟರ್ ಆಫ್ ಮ್ಯಾಲಡೀಸ್ ಕಥಾಸಂಕಲನದ ಅನುವಾದ `ಬೇನೆಗಳ ದುಭಾಷಿ'. ಬೇನೆಗಳ ದುಭಾಷಿ, ಪರಿಸರ ಅರ್ಥಶಾಸ್ತ್, ಮಧ್ಯಕಾಲೀನ ಭಾರತ, ಸಮಾಜಶಾಸ್ತ್ರದ ಸ್ಥಾಪಕ ಪಿತಾಮಹರು, ಪ್ರಾರಂಭಿಕ ಹಂತದ ...
READ MORE