ಕನ್ನಡದ ಗಾರುಡಿಗ ಕವಿ, ದ.ರಾ.ಬೇಂದ್ರೆಯವರ ಸಾಹಿತ್ಯ ಬದುಕಿನಲ್ಲಿ ಅವರ ಜತೆ ತೀರಾ ಒಡನಾಟದಲ್ಲಿದ್ದ ಸಾಹಿತ್ಯದ ಗೆಳೆಯರ ಬಗ್ಗೆ ಹಾಗೂ ಆ ಗೆಳೆಯರ ಗುಂಪಿನ ಬಗ್ಗೆ ಈ ಕಿರುಪುಸ್ತಕದಲ್ಲಿ ವಿವರವಾಗಿ ಪ್ರಸ್ತಾಪಿಸಲಾಗಿದೆ.
ಪ್ರಾಧ್ಯಾಪಕ, ಸಾಹಿತಿ ವಾಮನ ಬೇಂದ್ರೆ ಅವರ (ಜನನ: 1935 ಜುಲೈ 28 ) ಹುಟ್ಟೂರು ಹಾವೇರಿ ಜಿಲ್ಲೆಯ ರಾಣಿ ಬೆನ್ನೂರು. ತಂದೆ ದ.ರಾ.ಬೇಂದ್ರೆ, ತಾಯಿ ಲಕ್ಷ್ಮೀಬಾಯಿ. ಪ್ರಾರಂಭಿಕ ಶಿಕ್ಷಣ ಗದಗದಲ್ಲಿ ನೆರವೇರಿತು. ಕರ್ನಾಟಕ ವಿಶ್ವವಿದ್ಯಾಲಯದ ಸ್ನಾತಕೋತ್ತರ ಪದವೀಧರರು. ಪುಣೆ ವಿಶ್ವವಿದ್ಯಾಲಯಕ್ಕೆ ‘ಲಕ್ಷ್ಮೀಶನ ಜೈಮಿನಿ ಭಾರತ - ಒಂದು ಅಧ್ಯಯನ ’ ಮಹಾಪ್ರಬಂಧ ಮಂಡಿಸಿ ಪಿಎಚ್.ಡಿ. ಪಡೆದರು. ಕನ್ನಡ, ಮರಾಠಿ, ಇಂಗ್ಲಿಷ್, ಹಿಂದಿ ಭಾಷೆಗಳ ಮೇಲೆ ಪ್ರಭುತ್ವವಿತ್ತು. ಸಂಗೀತ, ನಾಟಕ, ಭಾಷಣದಲ್ಲೂ ಆಸಕ್ತಿಯಿದ್ದು, ‘ತೊದಲು’ ಅವರ ಮೊದಲ ಕವನ. ಸಂಕಲನ. ‘ಕುಶಲಕವಿ ಲಕ್ಷ್ಮೀಶ, ಲಕ್ಷ್ಮೀಶ ಕವಿ-ಕಾವ್ಯ ಪರಂಪರೆ, ಲಕ್ಷ್ಮೀಶ : ಒಂದು ಅಧ್ಯಯನ, ...
READ MORE