ಘಾಚರ್ ಘೋಚರ್, ನಿರ್ವಾಣ, ಕೋಳಿ ಕೇಳಿ ಮಸಾಲೆ, ರಿಸ್ಕ್ ತಗೊಂಡು, ಸುಧೀರನ ತಾಯಿ, ವಿಚಿತ್ರ ಕತೆ - ಇವು ಈ ಸಂಕಲನದಲ್ಲಿರುವ ವಿವೇಕರ ಕಥೆಗಳು. ’ಬೇರೆ ಎಲ್ಲಿದ್ದರೂ ನಾವು ಮಾತಾಡುತ್ತಿರಲಿಲ್ಲ. ಒಬ್ಬರನ್ನೊಬ್ಬರು ನೋಡದ ಹಾಗೆ ಹೋಗಿಬಿಡುತ್ತಿದ್ದೆವು ಅಂತಲೂ ಅನಿಸುತ್ತದೆ. ಆ ಸಂಜೆ, ಆ ಹಸಿವು ಮತ್ತು ಎಲ್ಲಕ್ಕಿಂತ ಹೆಚ್ಚಾಗಿ ಆ ಪರದೇಶ - ಇದೆಲ್ಲ ಇಲ್ಲದಿದ್ದರೆ ಈ ಭೆಟ್ಟಿ ಆಗುತ್ತಲೇ ಇರಲಿಲ್ಲ. ಸಂಯೋಗ ಅಂದರೆ ಹಾಗೇ. ಎಲ್ಲವೂ ಏಕತ್ರ ಸಂಭವಿಸಬೇಕು. ('ನಿರ್ವಾಣ' ಕತೆಯಿಂದ) ಆರಿಸಿಕೊಂಡಿದೆ. ಒಟ್ಟಾರೆ ಸ್ನೇಹ ಸಂಬಂಧ, ಬದುಕಿನ ಕುರಿತ ಕಥೆಗಳಾಗಿವೆ.
ವಿವೇಕ ಶಾನಭಾಗ ಅವರು ಉತ್ತರ ಕನ್ನಡ ಜಿಲ್ಲೆಯವರು. ಕನ್ನಡದ ಪ್ರಮುಖ ಕತೆಗಾರರಲ್ಲಿ ಒಬ್ಬರಾದ ವಿವೇಕ ಅವರು 'ದೇಶಕಾಲ' ಎಂಬ ಸಾಹಿತ್ಯಕ ಪತ್ರಿಕೆಯನ್ನೂ ಏಳು ವರ್ಷ ಕಾಲ ನಡೆಸಿದರು. ಹೊಸ ಬಗೆಯ ಕಥೆ ಕಟ್ಟುವ ಅವರು ಸಣ್ಣ ಊರು ಅಥವಾ ವಿಶಾಲ ಜಗತ್ತುಗಳೆರಡರಲ್ಲಿಯೂ ಮನುಷ್ಯರ ಮನಸ್ಸಿನ ಆಯಾಮ ಗುರುತಿಸಬಲ್ಲರು. ಅವರ ’ಘಾಚರ್ ಘೋಚರ್ ನೀಳ್ಗತೆಯ ಇಂಗ್ಲಿಷ್ ಅನುವಾದ ಜಗತ್ತಿನ ಸಾಹಿತ್ಯ ವಲಯದ ಗಮನ ಸೆಳೆದಿದೆ. ಲಂಡನ್, ಅಮೆರಿಕಗಳಲ್ಲಿ ಪ್ರತ್ಯೇಕ ಆವೃತ್ತಿ ಕಂಡಿರುವ ಈ ಕೃತಿ ಜಗತ್ತಿನ 18 ಭಾಷೆಗಳಿಗೆ ಅನುವಾದಗೊಂಡು ಮಚ್ಚುಗೆ ಗಳಿಸಿದೆ. ಅಂಕುರ, ಲಂಗರು, ಹುಲಿಸವಾರಿ, ಮತ್ತೊಬ್ಬನ ...
READ MORE