"ಘಟನೆಗಳಲ್ಲಿ ಗಾಂಧೀಜಿ" ಜಯದೇವ ಜಿ.ಎಸ್ ಅವರ ಕೃತಿಯಾಗಿದೆ. ಸತ್ಯ ಅಹಿಂಸೆ ಈ ಭಾವಗಳು ಪರ್ವತಗಳಷ್ಟೇ ಪುರಾತನವಾದವು. ನನ್ನ ಶಕ್ತಿಗೆ ಸಾಧ್ಯವಾದಷ್ಟು ವಿಪುಲ ಪ್ರಮಾಣದಲ್ಲಿ ಅವೆರಡರಲ್ಲೂ ಪ್ರಯೋಗಗಳನ್ನು ನಡೆಸಿರುವುದಷ್ಟೇ ನನ್ನ ಕೆಲಸ. ಹಾಗೆ ಮಾಡುವಾಗ ಕೆಲವು ಸಲ ತಪ್ಪು ಮಾಡಿದ್ದೇನೆ! ಆ ತಪ್ಪುಗಳಿಂದ ಪಾಠ ಕಲಿತಿದ್ದೇನೆ. ಹೀಗೆ ಜೀವನ ಮತ್ತು ಅದರ ಸಮಸ್ಯೆಗಳು ಸತ್ಯ ಅಹಿಂಸೆಗಳು ಅನುಷ್ಠಾನಗಳಲ್ಲಿ ನಡೆಸಿರುವ ಅನೇಕ ಪ್ರಯೋಗಗಳಾಗಿವೆ. ಗಾಂಧೀ ಪಂಥವೆನ್ನುವುದು ದೋಷದ ಪ್ರತೀಕವಾಗಿರುವುದಾದರೆ ಅದು ನಾಶ ಹೊಂದಲಿ. ಸತ್ಯ ಅಹಿಂಸೆಗಳು ಅಜರಾಮರ. ಆದರೆ ಗಾಂಧೀಪಂಥ ಎಂಬುದು ಪಂಥಾಭಿಮಾನಕ್ಕೆ ಮತ್ತೊಂದು ಹೆಸರಾದರೆ ಅದು ವಿನಾಶ ಯೋಗ್ಯವೇ ನಿಜ. ತಾನು ಗಾಂಧೀಜಿಯ ಅನುಯಾಯಿ ಎಂದು ಯಾರೊಬ್ಬರೂ ಹೇಳದಿರಲಿ. ನಾನು ನನ್ನನ್ನು ಅನುಸರಿಸಿದರೆ ಸಾಕು. ಅದರಲ್ಲೂ ನಾನು ಎಂತಹ ಅಸಮರ್ಪಕ ಅನುಯಾಯಿ ಎಂಬುದನ್ನು ನಾನು ಬಲ್ಲೆ! ಯಾವ ತತ್ವಗಳಿಗಾಗಿ ನಾನು ನಿಂತಿದ್ದೇನೆಯೋ ಅವುಗಳಿಗೆ ತಕ್ಕಂತೆ ನಾನು ಬಾಳುತ್ತಿಲ್ಲ. ನೀವು ಅನುಯಾಯಿಗಳಲ್ಲ! ಸಹವಿದ್ಯಾರ್ಥಿಗಳು, ಸಹಯಾತ್ರಿಕರು, ಸಹಅನ್ವೇಷಕರು, ಸಹಉದ್ಯೋಗಿಗಳು. – ಗಾಂಧಿ.
©2025 Book Brahma Private Limited.