ಮಾಧವ ಕುಲಕರ್ಣಿ ಅವರು ಕನ್ನಡದ ಹಿರಿಯ ವಿಮರ್ಶಕರಲ್ಲಿ ಒಬ್ಬರು. ಗಿರೀಶ ಕಾರ್ನಾಡರ ನಾಟಕಗಳ ವೈಶಿಷ್ಟ್ಯ ಹಾಗೂ ಅವುಗಳ ಮಹತ್ವದ ಬಗ್ಗೆ ವಿಮರ್ಶಾತ್ಮಕ ಟಿಪ್ಪಣಿಗಳನ್ನು ಈ ಪುಸ್ತಕದಲ್ಲಿ ನೀಡಿದ್ದಾರೆ. ಮಾಧವ ಕುಲಕರ್ಣಿ ಅವರ ಒಳನೋಟಗಳು ಕಾರ್ನಾಡರ ನಾಟಕಗಳ ಓದನ್ನು ಮತ್ತಷ್ಟು ಅರಿಯುವುದಕ್ಕೆ ಸಹಾಯಕವಾಗಿವೆ.
ಲೇಖಕ, ವಿಮರ್ಶಕ ಮಾಧವ ಕುಲಕರ್ಣಿ ಅವರು ಈಗಿನ ಗದಗ ಜಿಲ್ಲೆ ಮತ್ತು ಆಗಿನ ಧಾರವಾಡ ಜಿಲ್ಲೆಯವರು. ಪ್ರಾಥಮಿಕ ಶಿಕ್ಷಣದಿಂದ ಎಸ್.ಎಸ್.ಎಲ್.ಸಿ ವರೆಗೆ ಕನ್ನಡ ಮಾಧ್ಯಮದಲ್ಲಿ ಪೂರೈಸಿರುವ ಅವರು ಹೈಸ್ಕೂಲು ಶಿಕ್ಷಣವನ್ನು ವಿದ್ಯಾದಾನ ಸಮಿತಿ ಹೈಸ್ಕೂಲು ಗದಗದಲ್ಲಿ ಪೂರ್ಣಗೊಳಿಸಿದ್ದಾರೆ. ತಂದೆ ಎ.ವಿ. ಕುಲಕರ್ಣಿ ಗದುಗಿನ ಮುನ್ಸಿಪಲ್ ಹೈಸ್ಕೂಲಿನಲ್ಲಿ ಶಿಕ್ಷಕರಾಗಿದ್ದರು. ಅಲ್ಲದೇ ಹೈಸ್ಕೂಲು ಶಿಕ್ಷಣದಲ್ಲಿ ಮುಖ್ಯೋಪಾಧ್ಯಾಯರಾಗಿದ್ದ ಕೆ.ಎಸ್.ಎಸ್. ಅಯ್ಯಂಗಾರ್ ಅವರ ಆಡಳಿತ ಕ್ರಮ ಮತ್ತು ಶಿಸ್ತು ನನ್ನ ಮೇಲೆ ಪ್ರಭಾವ ಬೀರಿದವು ಎನ್ನುತ್ತಾರೆ ಮಾಧವ ಕುಲಕರ್ಣಿ. ಗದುಗಿನ ಜೆ.ಟಿ. ಕಾಲೇಜಿನಿಂದ ಕಲಾ ವಿಭಾಗದಲ್ಲಿ ಪದವಿ, ಕರ್ನಾಟಕ ವಿಶ್ವವಿದ್ಯಾಲಯದಿಂದ 1968ರಲ್ಲಿ ಸ್ನಾತಕೋತ್ತರ ...
READ MORE