‘ಗುಬ್ಬಿಗೂಡು ಮತ್ತು ಇತರೆ ಕಥೆಗಳು’ ಲೇಖಕಿ ಅಂಜನಾ ಕೃಷ್ಣಪ್ಪ ಅವರು ರಚಿಸಿರುವ ಮಕ್ಕಳ ಕಥಾ ಸಂಕಲನ. ಮಗುವಿಗೆ ಸಾಮಾಜಿಕ ಜೀವನವನ್ನು ಸುಸಂಸ್ಕೃತ ವ್ಯಕ್ತಿಯಾಗಿ ಪ್ರವೇಶಿಸಲು ಅಗತ್ಯವಾದ ತರಬೇತಿಯನ್ನು ನೀತಿಕಥೆಗಳು, ಮನೆ ಮತ್ತು ಶಿಕ್ಷಣದ ಮೂಲಕ ಒದಗಿಸುತ್ತವೆ. ಮಕ್ಕಳ ಬೆಳವಣಿಗೆಗೆ ಬೇಕಾದ ಸಾಮಾಜಿಕ ವಾತಾವರಣವನ್ನು ನಿರ್ಮಿಸುವಂತಹ ಕಥೆಗಳು ಈ ಕೃತಿಯಲ್ಲಿವೆ.
ಡಾ. ಅಂಜನಾ ಕೃಷ್ಣಪ್ಪನವರು ಮೂಲತಃ ಬಳ್ಳಾರಿ ಜಿಲ್ಲೆ ಹೂವಿನಹಡಗಲಿ ತಾಲ್ಲೂಕಿನ ನಂದಿಹಳ್ಳಿ ಗ್ರಾಮದವರು. 1953ರ ಜೂನ್ 01ರಂದು ಜನನ. ಮಲ್ಲಿಗೆ ನಾಡಿನ ಕವಯತ್ರಿ ಹಾಗೂ ಲೇಖಕಿ. ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿಯಾಗಿದ್ದಾರೆ. ಕವನ ಸಂಕಲನ, ಕಾದಂಬರಿ, ಶ್ರೀ ಬೆಟ್ಟದ ಮಲ್ಲೇಶ್ವರ ಭಕ್ತೀಗೀತೆಗಳು ಹಾಗೂ ಶರಣರ ವಚನಗಳ ಕುರಿತ ಸಂಶೋಧನಾ ಗ್ರಂಥಗಳನ್ನು ಸಮರ್ಪಿಸಿದ್ದಾರೆ. ಅವರ ಕವಿತೆ, ಲೇಖನ, ಕಾದಂಬರಿಗಳು, ನಾಡಿನ ಅನೇಕ ಪತ್ರಿಕೆಗಳಲ್ಲಿ ಬೆಳಕು ಕಂಡಿವೆ. ...
READ MORE