‘ಗುರುಗಳಾಗಿ ತಾಯಿ ತಂದೆ’ ಲೇಖಕ ಕೆ.ಟಿ. ಗಟ್ಟಿ ಅವರ ಕೃತಿ. ಬೆಳೆಯುವ ಸಿರಿ ಮೊಳಕೆಯಲ್ಲಿ ಎಂಬಂತೆ ಮಗುವಿನ ಸಾಮಾಜೀಕರಣ ಮತ್ತು ಬೆಳವಣಿಗೆ ಹಂತದಲ್ಲಿ ತಂದೆ ತಾಯಿಗಳ ಪಾತ್ರ ಮಹತ್ವದ್ದು. ಮಕ್ಕಳ ಶಿಕ್ಷಣದ ಬಗ್ಗೆ ಯಾರು ಯೋಚಿಸಬೇಕು ಎಂಬುದೇ ಬಹುದೊಡ್ಡ ಪ್ರಶ್ನೆ ಈ ಕೃತಿಯಲ್ಲಿ ಹಿರಿಯ ಲೇಖಕರು ಮಕ್ಕಳ ವಿದ್ಯಾಭ್ಯಾಸದಲ್ಲಿ ತಂದೆ ತಾಯಿಗಳ ಪಾತ್ರದ ಬಗ್ಗೆ ವಿವರಿಸಿದ್ದಾರೆ.
ಕಾದಂಬರಿಕಾರ, ಭಾಷಾತಜ್ಞ, ಸಮರ್ಥ ಪ್ರಾಧ್ಯಾಪಕರೆನಿಸಿದ ಕೆ.ಟಿ. ಗಟ್ಟಿಯವರು ಕಾಸರಗೋಡು ಸಮೀಪದ ಕೂಡ್ಲೂವಿನಲ್ಲಿ ಜನಿಸಿದರು. ತಂದೆ ಧೂಮಪ್ಪಗಟ್ಟಿಯವರು ಕೃಷಿಕರಾದರೂ ಯಕ್ಷಗಾನ ಕಲೆಯ ಬಗ್ಗೆ ಅಪಾರ ಒಲವಿದ್ದವರು. ತಾಯಿ ಪರಮೇಶ್ವರಿ ತುಳು-ಮಲಯಾಳಂ ಪಾಡ್ದನ ಹಾಡುಗಳನ್ನು ಕಲಿತವರು. ಉತ್ತಮ ಭಾಷೆ, ಆಕರ್ಷಕ ಶೈಲಿ, ಹೊಸ ಹೊಸ ವಸ್ತು, ಸರಳ ನಿರೂಪಣೆಗಳ ಮೂಲಕ ಕನ್ನಡ ಸಾರಸ್ವತ ಲೋಕದಲ್ಲಿ ಮನೆ ಮಾತಾದ ಹಿರಿಯ ಕಥೆಗಾರ ಕೆ.ಟಿ.ಗಟ್ಟಿ ಅವರು ಎಲ್ಲಾ ಓದುಗರಿಗೆ ಚಿರಪರಿಚಿತರು. ಕೇರಳ ವಿಶ್ವವಿದ್ಯಾಲಯದಿಂದ ಇಂಗ್ಲಿಷ್ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಮತ್ತು ಬಿಎಡ್ ಪದವಿ ಪಡೆದಿರುವ ಕೆ.ಟಿ.ಗಟ್ಟಿ ದಕ್ಷಿಣ ಕನ್ನಡ ಜಿಲ್ಲೆ ಉಜಿರೆಯವರು. ಜನಿಸಿದ್ದು 1938ರಲ್ಲಿ. ಸದ್ಯ ...
READ MORE