ಗುರುಶಿಷ್ಯರ ತತ್ವಪದಗಳು

Author : ವಿಜಯಶ್ರೀ ಸಬರದ

Pages 56

₹ 25.00




Year of Publication: 1997
Published by: ಕರ್ನಾಟಕ ಜಾನಪದ ಮತ್ತು ಯಕ್ಷಗಾನ ಅಕಾಡೆಮಿ
Address: ನೃಪತುಂಗ ರಸ್ತೆ, ಬೆಂಗಳೂರು.

Synopsys

ವಿಭಿನ್ನ ಸ್ತರಗಳಿಂದ ಬಂದಂತಹ ತತ್ವಪದಕಾರರು ತಮ್ಮ ಬದುಕಿನ ಅನುಭಾವಗಳನ್ನು ವಸ್ತುನಿಷ್ಠವಾಗಿ ಭಕ್ತಿ, ಜ್ಞಾನ, ವೈರಾಗ್ಯದ ನೆಲೆಯಲ್ಲಿ ಅಭಿವ್ಯಕ್ತಿಸಿದ್ದಾರೆ. ಗುರುಭಕ್ತಿ, ಸದಾಚಾರ, ನೈತಿಕತೆ, ಜಾತ್ಯತೀತತೆ, ಭಾವೈಕ್ಯತೆ ವಸಹಾತುಶಾಹಿ ಅಂತಹ ವಿಚಾರಗಳನ್ನು ಕುರಿತು ವಿವೇಚಿಸಿದ್ದಾರೆ. ರಾಯಚೂರು ಜಿಲ್ಲೆಯ ತತ್ವಪದಕಾರರ ಕುರಿತು ಲೇಖಕಿ ವಿಜಯಶ್ರೀ ಸಬರದ ಅವರು ಚರ್ಚಿಸಿದ್ದಾರೆ.

About the Author

ವಿಜಯಶ್ರೀ ಸಬರದ
(01 February 1957)

ಮಹಿಳೆಯರ ಶೋಷಣೆ ಮತ್ತು ಸ್ತ್ರೀಯರು ಎದುರಿಸುತ್ತಿರುವ ಸವಾಲುಗಳ ಬಗ್ಗೆ ತಮ್ಮ ಖಚಿತ ಅಭಿಪ್ರಾಯ ಮಂಡಿಸುವ ಲೇಖಕಿ ವಿಜಯಶ್ರೀ ಸಬರದ. ಅವರು ಜನಿಸಿದ್ದು 1957ರ ಫೆಬ್ರುವಿರ 1ರಂದು. ತಂದೆ ಗುಣವಂತರಾವ ಪಾಟೀಲ. ತಾಯಿ ಸಂಗಮ್ಮ. ಪ್ರಾರಂಭಿಕ ಶಿಕ್ಷಣ ಹಾಗೂ ಕಾಲೇಜು ಪದವಿ ಶಿಕ್ಷಣವನ್ನು ಬೀದರ್‌ನಲ್ಲಿ ಪಡೆದ ಅವರು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಿಂದ ಎಂ.ಎ. ಪದವಿ ಪಡೆದರು. ’ಅನುಪಮಾ ನಿರಂಜನರ ಕಾದಂಬರಿಗಳು; ಒಂದು ಅಧ್ಯಯನ” ಎಂಬ ಪ್ರಬಂಧ ಮಂಡಿಸಿ ಗುಲಬರ್ಗಾ ವಿಶ್ವವಿದ್ಯಾಲಯದಿಂದ ಪಡೆದ ಪಿಎಚ್‌.ಡಿ. ಪದವಿ ಪಡೆದರು. ಬೀದರ್‌ನ ಅಕ್ಕ ಮಹಾದೇವಿ ಮಹಿಳಾ ವಿದ್ಯಾಲಯದಲ್ಲಿ ಉಪನ್ಯಾಸಕಿಯಾಗಿ ವೃತ್ತಿ ಜೀವನ ಆರಂಭಿಸಿದ ಅವರು ನಂತರ ...

READ MORE

Related Books