ಕವಿ-ಸಾಹಿತಿ ಎಚ್.ಎಸ್. ವೆಂಕಟೇಶ ಮೂರ್ತಿ ಅವರ ಆತ್ಮಕಥನ ಕೃತಿ-ಎಚ್ಚೆಸ್ವಿ ಅನಾತ್ಮ ಕಥನ. ಅವರ ಆತ್ಮಕಥನಕ್ಕೊಂದು ಹೊಸ ರೂಪು ನೀಡಲಾಗಿದೆ ಎಂದು ಕೃತಿಯ ಉಪಶೀರ್ಷಿಕೆ ಹೇಳುತ್ತದೆ. ಕವಿಯಾಗಿ, ಸಾಹಿತಿಯಾಗಿ, ಅಂಕಣಕಾರರಾಗಿ, ನಾಟಕ ರಚನೆಕಾರರಾಗಿ ಹೀಗೆ ಹತ್ತು ಹಲವು ವಲಯಗಳಲ್ಲಿ ಸಾಹಿತ್ಯ ಕೃಷಿ ಮಾಡಿರುವ ಅವರ ಆತ್ಮಕಥನ ವೈವಿಧ್ಯತೆಯಿಂದ ಸಮೃದ್ಧವಾಗಿದೆ. ನಿರೂಪಣಾ ಶೈಲಿ, ಸಾಮಾಜಿಕ ಹೊಣೆಗಾರಿಕೆಯ ಚಿಂತನೆಗಳಿಂದ ಕೃತಿಯು ಓದುಗರ ಗಮನ ಸೆಳೆಯುತ್ತದೆ.
ವೆಂಕಟೇಶ ಮೂರ್ತಿ ಅವರು ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕಿನ ಹೊದಿಗೆರೆ ಎಂಬ ಸಣ್ಣ ಹಳ್ಳಿಯಲ್ಲಿ ಮಧ್ಯಮವರ್ಗದ ಕುಟುಂಬವೊಂದರಲ್ಲಿ 23-06-1944ರಲ್ಲಿ ಜನಿಸಿದರು. ಮೂವತ್ತು ವರ್ಷಗಳ ಕಾಲ ಗ್ರಾಮ್ಯಜೀವನ ನಡೆಸಿ ನಂತರ ಬೆಂಗಳೂರಿನ ಸೇಂಟ್ ಜೋಸೆಫ್ ವಾಣಿಜ್ಯ ಕಾಲೇಜಿನಲ್ಲಿ ಕನ್ನಡ ಅಧ್ಯಾಪಕರಾಗಿ 1973ರಲ್ಲಿ ನೇಮಕಗೊಂಡರು. 2000 ರಲ್ಲಿ ನಿವೃತ್ತರಾದ ಅವರು ಈಗ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಪ್ರಾರಂಭದಲ್ಲಿ ಯಕ್ಷಗಾನ, ಬಯಲಾಟದಂಥ ರಂಗಪ್ರದರ್ಶನಗಳು ಇವರ ಮೇಲೆ ಗಾಢ ಪ್ರಭಾವ ಬೀರಿದವು. ಬಾಲ್ಯದಲ್ಲೇ ಕುಮಾರವ್ಯಾಸ, ಪುರಂದರ, ಲಕ್ಷ್ಮೀಶ ಮೊದಲಾದವರ ಕೃತಿಗಳ ನಿಕಟ ಸಂಪರ್ಕ ದೊರೆಯಿತು. ಮುಂದೆ ಕನ್ನಡ, ಸಂಸ್ಕೃತ, ಇಂಗ್ಲಿಷ್ ಸಾಹಿತ್ಯ ಪರಂಪರೆಯೊಂದಿಗೆ ನಡೆಸಲಾದ ...
READ MORE