ರಾಧಾದೇವಿ ಅವರ ಬಹುತೇಕ ಕಾದಂಬರಿಗಳಂತೆ ಇಲ್ಲಯೂ ಸಹ ನಾಯಕಿ ಪ್ರಧಾನ ಕಾದಂಬರಿ ಇದು. ಹಲವು ಆಮೀಷಗಳನ್ನು ಮುಗ್ಧತೆಯ ನೆರಳಿನಲ್ಲಿ ನೋಡಿದರೆ ಆಗುವ ಅನಾಹುತವನ್ನು ಇಲ್ಲಿ ಚಿತ್ರಿಸಿದ್ದಾರೆ ಲೇಖಕಿ. ಮುಗ್ಧತೆಯ ಪರದೆ ಸರಿದು ವಾಸ್ತವಕ್ಕೆ ಹೆಜ್ಜೆ ಇಟ್ಟ ಕತಾ ನಾಯಕಿಯ ಬದುಕು ಎತ್ತ ತಿರುವು ಪಡೆಯುತ್ತದೆ ಎಂಬುದು ಈ ಕಾದಂಬರಿಯ ಕಥಾ ವಸ್ತು.
ಕನ್ನಡ ಕಾದಂಬರಿಗಾರ್ತಿ ಹೆಚ್. ಜಿ.ರಾಧಾದೇವಿ ಅವರು ತಮ್ಮ ವೃತ್ತಿ ಜೀವನದಲ್ಲಿ 30ಕ್ಕೂ ಹೆಚ್ಚು ಕಾದಂಬರಿಗಳನ್ನು ರಚಿಸಿದ್ದಾರೆ. ಹುಟ್ಟಿದ್ದು ಕೋಲಾರ ಜಿಲ್ಲೆಯ ಶಿಡ್ಲಘಟ್ಟದಲ್ಲಿ. ತಂದೆ ಗೋಪಿನಾಥಾಚಾರ್. ಪ್ರಾಥಮಿಕ ಶಾಲಾ ಶಿಕ್ಷಕರು.ಕೋಲಾರದಲ್ಲಿ ಸರಕಾರಿ ಪ್ರೌಢಶಾಲೆಯಲ್ಲಿ ಎಸ್.ಎಸ್.ಎಲ್.ಸಿ.-ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದರು. ಮುಂದಿನ ಓದಿಗೆ ತಡೆಯುಂಟಾಗಿ, ಮನೆ ಪಾಠ ಆರಂಭಿಸಿದರು.ಈ ಅನುಭವವೇ ಶಾಲಾ ಶಿಕ್ಷಕಿಯಾಗುವ ಅವಕಾಶಕ್ಕೆ ದಾರಿಯಾಯಿತು. ದುಡಿಯುವ ಮಹಿಳಾ ವರ್ಗ ಕುರಿತ ಅನೆಕ ಸಮಸ್ಯೆಗಳನ್ನು ತಮ್ಮ ಕತೆ ಕಾದಂಬರಿಗಳ ಮೂಲಕ ಬೆಳಕು ಚೆಲ್ಲಿದ್ದು, ಈ ಬಗ್ಗೆ ಹಲವಾರು ಲೇಖನಗಳನ್ನು ಸಹ ಬರೆದಿದ್ದಾರೆ. ‘ಅನುರಾಗ ಅರಳಿತು, ಒಲವಿನ ಸುಧೆ ಒಲಿದು ಬಂದ ಅಪ್ಸರೆ, ಕತ್ತಲಲ್ಲಿ ಕಂಡ ಮಿಂಚು, ...
READ MORE